ಮುಂದಿನ ಬಜೆಟ್‌ಗೆ ವಿಜಯನಗರ ಪ್ರೇರಣೆ : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ವಿಜಯನಗರ, ಡಿ.21: ಮುಂದಿನ ಬಜೆಟ್ ಮಂಡಿಸಲು ವಿಜಯನಗರದಿಂದ ಪ್ರೇರಣೆ ಪಡೆದು 2047ರ ವಿಕಸಿತ ಭಾರತದ ನಿರ್ಮಾಣಕ್ಕಾಗಿ ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕಮಲಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರವಿವಾರ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಲಸಿಕೆ ಹಾಕಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಹಣಕಾಸು ಸಚಿವಾಲಯದ 120 ಅಧಿಕಾರಿಗಳ ತಂಡವು ಹಂಪಿಗೆ ಭೇಟಿ ನೀಡಿ ವಿಶ್ವ ಪಾರಂಪರಿಕ ತಾಣ ವೀಕ್ಷಿಸಿದೆ. ಇದು ವಿಜಯನಗರ ಸಾಮ್ರಾಜ್ಯದ ಮಹತ್ವ, ವೈಭವ ಅರಿತುಕೊಳ್ಳಲು ಸಾಧ್ಯವಾಗಿದೆ. ಇಲ್ಲಿ ಅಧಿಕಾರಿಗಳೊಂದಿಗೆ ಚಿಂತನ ಮಂಥನ ಸಭೆಯನ್ನು ನಡೆಸಲಾಗಿದೆ
ಮಾನವಕುಲಕ್ಕೆ ಶಾಪದಂತಿರುವ ಪೋಲಿಯೊ ಕಾಯಿಲೆ ಭಾರತ ದೇಶದಿಂದ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕಾಗಿದೆ. ಇದಕ್ಕಾಗಿ ವೈದ್ಯಕೀಯ ಸಮುದಾಯಕ್ಕೆ ಬೆಂಬಲ ನೀಡಬೇಕಾಗಿದೆ. ವೈದ್ಯರು, ಪ್ಯಾರಾಮೆಡಿಕಲ್ ಸಿಬ್ಬಂದಿ, ನರ್ಸ್‌ಗಳು ಹಾಗೂ ಮಕ್ಕಳ ಆರೈಕೆಯಲ್ಲಿ ತೊಡಗಿರುವ ಎಲ್ಲರಿಗೂ ಅಗತ್ಯವಾದ ಸಹಾಯ ದೊರಕುವಂತೆ ನೋಡಿಕೊಳ್ಳಬೇಕಾಗಿದೆ ಎಂದರು.
ಕಾರ್ಪೊರೇಟ್ ವ್ಯವಹಾರಗಳು ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ರಾಜ್ಯ ಸಚಿವ ಹರ್ಷ ಮಲ್ಹೋತ್ರಾ, ಸಂಸದರಾದ ಇ.ತುಕಾರಾಂ, ಶಾಸಕರಾದ ಎಚ್.ಆರ್.ಗವಿಯಪ್ಪ, ಡಾ.ಎನ್.ಟಿ.ಶ್ರೀನಿವಾಸ್, ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ನಾಗರಾಜು ಮದ್ದೀರಲಾ, ಕೇಂದ್ರ ನೇರ ತೆರಿಗೆ ಮಂಡಳಿಯ ಅಧ್ಯಕ್ಷ ರವಿ ಅಗರ್ವಾಲ್, ಹಣಕಾಸು ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಅನುರಾಧ ಠಾಕೂರ್, ಹಣಕಾಸು ಸಚಿವರ ಆಪ್ತ ಕಾರ್ಯದರ್ಶಿ ಅನಿರುದ್ಧ ಶ್ರವಣ್.ಪಿ, ಹಣಕಾಸು ಇಲಾಖೆ ಸಾರ್ವಜನಿಕ ಉದ್ದಿಮೆಗಳ ಇಲಾಖೆ ಕಾರ್ಯದರ್ಶಿ ಕೆ.ಮೋಸಸ್ ಚಲೈ, ಕಂಪನಿ ವ್ಯವಹಾರಗಳ ಸಚಿವಾಲಯ ಕಾರ್ಯದರ್ಶಿ ದೀಪ್ತಿಗೌರ್ ಮುಖರ್ಜಿ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಕ್ರಮ್ ಅಲಿ ಷಾ, ಜಿಲ್ಲಾ ರಕ್ಷಣಾಧಿಕಾರಿ ಎಸ್.ಜಾಹ್ನವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.







