Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ :...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಕೂಡ್ಲಿಗಿಯಲ್ಲಿ ಶೇ.91.48ರಷ್ಟು ಮತದಾನ

ವಾರ್ತಾಭಾರತಿವಾರ್ತಾಭಾರತಿ23 Oct 2026 9:57 PM IST
share
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಕೂಡ್ಲಿಗಿಯಲ್ಲಿ ಶೇ.91.48ರಷ್ಟು ಮತದಾನ

ಕೂಡ್ಲಿಗಿ/ವಿಜಯನಗರ: ಕೂಡ್ಲಿಗಿ ತಾಲೂಕಿನಲ್ಲಿ ನಡೆದ ಈಶಾನ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ಉತ್ಸಾಹದಿಂದ ಹಕ್ಕು ಚಲಾಯಿಸಿದ್ದು, ಒಟ್ಟಾರೆ ಶೇ. 91.48ರಷ್ಟು ಮತದಾನ ದಾಖಲಾಗಿದೆ. ತಾಲೂಕಿನಾದ್ಯಂತ ಯಾವುದೇ ಅಹಿತಕರ ಘಟನೆಗಳು ವರದಿಯಾಗದೆ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಸಂಪನ್ನಗೊಂಡಿತು.

ತಾಲೂಕಿನಾದ್ಯಂತ ಒಟ್ಟು ಮೂರು ಮತಗಟ್ಟೆಗಳನ್ನು ತೆರೆಯಲಾಗಿದ್ದು, ಬೆಳಗ್ಗೆ 8 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಯಿತು. ಕೂಡ್ಲಿಗಿ ತಾಲೂಕಿನಲ್ಲಿ ಒಟ್ಟು 352 ಮತದಾರರಿದ್ದು,ಬೆಳಗ್ಗೆ 10 ಗಂಟೆಯ ವೇಳೆಗೆ ಮತದಾನದ ಪ್ರಮಾಣ ಕೊಂಚ ಮಂದಗತಿಯಲ್ಲಿತ್ತು. 114 ಮತದಾರರಿರುವ ಕೂಡ್ಲಿಗಿ ಮತಗಟ್ಟೆಯಲ್ಲಿ ಶೇ. 11ರಷ್ಟು, 144 ಮತದಾರರಿರುವ ಹೊಸಹಳ್ಳಿ ಮತಗಟ್ಟೆಯಲ್ಲಿ ಶೇ. 10ರಷ್ಟು ಹಾಗೂ 94 ಮತದಾರರಿರುವ ಗುಡೇಕೋಟೆ ಮತಗಟ್ಟೆಯಲ್ಲಿ ಶೇ. 12ರಷ್ಟು ಮತದಾನವಾಗಿತ್ತು. ಮಧ್ಯಾಹ್ನದ ಬಳಿಕ ಮತಗಟ್ಟೆಗಳತ್ತ ಆಗಮಿಸಿದ ಶಿಕ್ಷಕರು ಮತ್ತು ಪದವೀಧರರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿದರು.

322 ಮಂದಿ ಮತದಾನ :

ಸಂಜೆ ಮತದಾನ ಮುಕ್ತಾಯಗೊಂಡಾಗ ತಾಲೂಕಿನ ಒಟ್ಟು 352 ಮತದಾರರ ಪೈಕಿ 322 ಮಂದಿ ಮತ ಚಲಾಯಿಸಿದ್ದರು. ಮತಗಟ್ಟೆವಾರು ಮತದಾನದ ವಿವರ ಹೀಗಿದೆ: ಕೂಡ್ಲಿಗಿ ಮತಗಟ್ಟೆಯಲ್ಲಿ 104, ಹೊಸಹಳ್ಳಿ ಮತಗಟ್ಟೆಯಲ್ಲಿ 133 ಹಾಗೂ ಗುಡೇಕೋಟೆ ಮತಗಟ್ಟೆಯಲ್ಲಿ 85 ಮಂದಿ ಮತ ಚಲಾಯಿಸಿದ್ದಾರೆ. ಈ ಮೂಲಕ ತಾಲೂಕಿನಲ್ಲಿ ಒಟ್ಟಾರೆ ಶೇ. 91.48ರಷ್ಟು ಮತದಾನ ದಾಖಲಾಗಿದೆ.

ಮತಗಟ್ಟೆಗಳಿಗೆ ತಹಶೀಲ್ದಾರ್ ಭೇಟಿ :

ಚುನಾವಣಾ ಪ್ರಕ್ರಿಯೆ ಸುಗಮವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಕೂಡ್ಲಿಗಿ ತಹಸೀಲ್ದಾರ್ ವಿ.ಕೆ. ನೇತ್ರಾವತಿ ಅವರು ಕೂಡ್ಲಿಗಿ, ಹೊಸಹಳ್ಳಿ ಹಾಗೂ ಗುಡೇಕೋಟೆ ಮತಗಟ್ಟೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ತಾಲೂಕಿನ ಮೂರೂ ಮತಗಟ್ಟೆಗಳಲ್ಲಿ ಯಾವುದೇ ಅಡ್ಡಿ-ಆತಂಕಗಳಿಲ್ಲದೆ ಸಂಪೂರ್ಣ ಶಾಂತಿಯುತವಾಗಿ ಮತದಾನ ನಡೆದಿದೆ. ಪ್ರತಿ ಮತಗಟ್ಟೆಗೆ ತಲಾ ಒಬ್ಬರು ಪಿಆರ್‌ಒ (PRO), ಒಬ್ಬರು ಎಪಿಆರ್‌ಒ (APRO), ಇಬ್ಬರು ಪಿಒ (PO) ಹಾಗೂ ಮೈಕ್ರೋ ಅಬ್ಸರ್ವರ್‌ಗಳನ್ನು ನೇಮಕ ಮಾಡಲಾಗಿತ್ತು. ಜೊತೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿವಿಧ ಅಭ್ಯರ್ಥಿಗಳ ಬೂತ್ ಏಜೆಂಟರು, ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಶಿಕ್ಷಕರು ಮತ್ತು ಪದವೀಧರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

Tags

KudligiNortheast Teachers' Constituency Election
share
ವಾರ್ತಾಭಾರತಿ
ವಾರ್ತಾಭಾರತಿ
Next Story
X