ಕೂಡ್ಲಿಗಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ

ಕೂಡ್ಲಿಗಿ/ವಿಜಯನಗರ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗುವ ಕಾರ್ಯಕ್ರಮಗಳ ಕುರಿತು ಪೂರ್ವಭಾವಿ ಸಭೆ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಗಳ ರೂಪುರೇಷೆ, ಭದ್ರತಾ ವ್ಯವಸ್ಥೆ, ಪಥಸಂಚಲನ (ಪರೇಡ್), ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಅಗತ್ಯ ಮೂಲಸೌಕರ್ಯಗಳ ಕುರಿತು ವಿವರವಾಗಿ ಚರ್ಚಿಸಲಾಯಿತು.
ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ಯಶಸ್ವಿಯಾಗಿ ನಡೆಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಪರಸ್ಪರ ಸಹಕಾರ ನೀಡಬೇಕು ಎಂದು ತಹಶೀಲ್ದಾರರು ತಿಳಿಸಿದರು.
ಸಭೆಯಲ್ಲಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಮಾಜಗಳ ಅಧ್ಯಕ್ಷರು, ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ಪತ್ರಿಕಾ ಮಾಧ್ಯಮದ ಪ್ರತಿನಿಧಿಗಳು ಉಪಸ್ಥಿತರಿದ್ದರು.
Next Story




