Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಅಂಕಿಅoಶಗಳ ವರದಿ ವಾಚನಕ್ಕಿಂತ ಗುಣಾತ್ಮಕ...

ಅಂಕಿಅoಶಗಳ ವರದಿ ವಾಚನಕ್ಕಿಂತ ಗುಣಾತ್ಮಕ ಅಭಿವೃದ್ಧಿ ಬಗ್ಗೆ ಚರ್ಚಿಸಿ: ಸಮೀರ್ ಶುಕ್ಲಾ

ವಾರ್ತಾಭಾರತಿವಾರ್ತಾಭಾರತಿ31 Aug 2025 10:51 PM IST
share
ಅಂಕಿಅoಶಗಳ ವರದಿ ವಾಚನಕ್ಕಿಂತ ಗುಣಾತ್ಮಕ ಅಭಿವೃದ್ಧಿ ಬಗ್ಗೆ ಚರ್ಚಿಸಿ: ಸಮೀರ್ ಶುಕ್ಲಾ
ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ

ವಿಜಯನಗರ (ಹೊಸಪೇಟೆ): ಸರ್ಕಾರದ ಹಂತದಲ್ಲಿ ಪರಿಹರಿಸಬಹುದಾದ ಸಮಸ್ಯೆಗಳು ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳಲ್ಲಿನ ಗುಣಾತ್ಮಕ ಅಂಶಗಳ ಬಗ್ಗೆ ಸಭೆಯಲ್ಲಿ ಚರ್ಚಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ (ಎಂ.ಎಸ್.ಎ.ಇ ಮತ್ತು ಗಣಿ) ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದ ಸಮೀರ್ ಶುಕ್ಲಾ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಶನಿವಾರ ಅವರು ಮಾತನಾಡಿದರು. ಹಿಂದೆ ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿರುವ ಅನುಭವ ಇರುವುದರಿಂದ ವಿಜಯನಗರ ಜಿಲ್ಲೆಯ ಬಗ್ಗೆ ಪೂರ್ಣ ಮಾಹಿತಿ ಇದೆ. ಪ್ರಗತಿ ಪರಿಶೀಲನೆ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ದಾಖಲೆಯಲ್ಲಿರುವ ಅಂಕಿಅಂಶಗಳನ್ನು ವಾಚನ ಮಾಡುವ ಬದಲು ತಮ್ತಮ್ಮ ಇಲಾಖೆಗಳಲ್ಲಿನ ಸಮಸ್ಯೆಗಳನ್ನು ಮುಕ್ತವಾಗಿ ಸಭೆಯಲ್ಲಿ ಚರ್ಚಿಸಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪುವ ಬಗ್ಗೆ ಮಾಹಿತಿ ಪಡೆದರು.

ಕುಡಿಯುವ ನೀರು ಪೂರೈಕೆಯಲ್ಲಿ ವಿಳಂಬ ಆಗದಂತೆ, ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಆನಾರೋಗ್ಯ ಪೀಡಿತರಾಗದಂತೆ ವಾಂತಿ ಭೇದಿ ಪ್ರಕರಣಗಳು, ಮಕ್ಕಳಲ್ಲಿ ಚರ್ಮ ಸಂಬಂಧಿತ ಸಮಸ್ಯೆಗಳು ಆಗದಂತೆ ನಿಗಾ ವಹಿಸಬೇಕು. ಹೆಚ್ಚು ನೈರ್ಮಲ್ಯತೆಗೆ, ಶುದ್ದ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಬೇಕು. ವಿದ್ಯಾರ್ಥಿಗಳಿಗೆ ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸಬೇಕು. ನಿಗದಿತ ವೇಳೆಗೆ ಸಮವಸ್ತ್ರ ವಿತರಣೆ, ವಸತಿ ನಿಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ವಾರ್ಡನ್‌ಗಳ ನಿಯೋಜನೆಗೆ ಗಮನ ಹರಿಸುವಂತೆ ಸೂಚಿಸಿದರು.

ಕೃಷಿ ಇಲಾಖೆ ಉಪನಿದೇರ್ಶಕ ನಯೀಮ್ ಪಾಷಾ ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 53843 ಹೆಕ್ಟರ್ ನಷ್ಟು ನೀರಾವರಿ ಮತ್ತು ಖುಷ್ಕಿ 224218 ಹೆಕ್ಟರ್ ನಷ್ಟು ಸೇರಿ 278060 ರಷ್ಟು ಬಿತ್ತನೆಯಾಗಿದೆ. ಒಟ್ಟು ವಿವಿಧ ರಸಗೊಬ್ಬರಗಳ ಬೇಡಿಕೆ ಅನುಸಾರ ಸರಬರಾಜು ಮತ್ತು ದಾಸ್ತಾನು ಮಾಡಲಾಗಿದೆ. ಯೂರಿಯಾ, ಡಿಎಪಿ, ಎಂಒಪಿ, ಎನ್‌ಪಿಕೆ, ಎಸ್‌ಎಸ್‌ಪಿ ಸೇರಿ ಒಟ್ಟು 111595 ಮೆಟ್ರಿಕ್ ಟನ್‌ಗಳಷ್ಟು ಬೇಡಿಕೆ ಇತ್ತು, 87014 ಮೆಟ್ರಿಕ್ ಟನ್ ಒಟ್ಟು ದಾಸ್ತಾನು ಪಡೆದು, 69972 ಮೆಟ್ರಿಕ್ ಟನ್‌ಗಳಷ್ಟು ವಿತರಣೆ ಮಾಡಲಾಗಿದೆ. ಸದ್ಯಕ್ಕೆ 17042 ಮೆಟ್ರಿಕ್ ಟನ್‌ಗಳು ದಾಸ್ತಾನು ಲಭ್ಯವಿದೆ ಎಂದು ಸಭೆಗೆ ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಲ್.ಆರ್.ಶಂಕರನಾಯ್ಕ ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ಒಟ್ಟು 66 ತಜ್ಞ ವೈದ್ಯರ ಕೊರತೆ ಇದೆ. ಅದರಲ್ಲೂ ಅನೆಸ್ತೇಷಿಯಾ ವೈದ್ಯರ ಅಗತ್ಯವಿದೆ. ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಈಗಾಗಲೇ ಹೊರಗುತ್ತಿಗೆ ಅಧಾರದಲ್ಲಿ ವೈದ್ಯರ ನೇಮಕಾತಿಗೆ ಅರ್ಜಿ ಅಹ್ವಾನಿಸಿದರು ಸೇವೆಗೆ ಮುಂದಾಗುತ್ತಿಲ್ಲ ಎಂದರು.

ಈ ವೇಳೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ವೇದಿಕೆಯಲ್ಲಿದ್ದರು. ಸಭೆಯಲ್ಲಿ ಹೊಸಪೇಟೆ ಸಹಾಯಕ ಆಯುಕ್ತ ಪಿ.ವಿವೇಕಾನಂದ, ಹರಪನಹಳ್ಳಿ ಸಹಾಯಕ ಆಯುಕ್ತ ಚಿದಾನಂದ ಗುರುಸ್ವಾಮಿ, ಜಿಲ್ಲೆಯ ಎಲ್ಲಾ ತಹಶೀಲ್ದಾರರು, ತಾಪಂ ಇಒಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X