Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಝಮೀರ್ ಅಹ್ಮದ್ ಖಾನ್‌ಗೆ ಡಿಸಿಎಂ ಅಥವಾ...

ಝಮೀರ್ ಅಹ್ಮದ್ ಖಾನ್‌ಗೆ ಡಿಸಿಎಂ ಅಥವಾ ಸಚಿವ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 Jun 2026 7:08 PM IST
share
ಝಮೀರ್ ಅಹ್ಮದ್ ಖಾನ್‌ಗೆ ಡಿಸಿಎಂ ಅಥವಾ ಸಚಿವ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

ಕಮಲಾಪುರ/ವಿಜಯನಗರ : ರಾಜ್ಯ ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಝಮೀರ್ ಅಹ್ಮದ್ ಖಾನ್‌ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಅಥವಾ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ವಿಜಯನಗರ ಜಿಲ್ಲೆಯ ಕಮಲಾಪುರ ಪಟ್ಟಣದಲ್ಲಿ ರೈತರು ಹಾಗೂ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್‌ಗೆ ವಿರುದ್ಧ ಘೋಷಣೆಗಳನ್ನು ಕೂಗಿ, ಜಮೀರ್ ಅಹಮ್ಮದ್ ಖಾನ್ ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸುವಂತೆ ಒತ್ತಾಯಿಸಿದರು. ಬಳಿಕ ಉಪತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮುಖಂಡರು, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅವಧಿಯಲ್ಲಿ ಜಮೀರ್ ಅಹಮ್ಮದ್ ಖಾನ್ ಅವರು ಜಿಲ್ಲೆಯ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾಮಗಾರಿಗೆ ವೇಗ ನೀಡುವುದು ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಜನಮನ್ನಣೆ ಗಳಿಸಿದ್ದಾರೆ ಎಂದು ತಿಳಿಸಿದರು.

ಬಡವರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ವಿವಿಧ ವಸತಿ ಯೋಜನೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಡಿಸಿಎಂ ಅಥವಾ ಕ್ಯಾಬಿನೆಟ್ ಸಚಿವ ಸ್ಥಾನ ನೀಡುವ ಮೂಲಕ ಅವರ ಸೇವೆಯನ್ನು ರಾಜ್ಯ ಮಟ್ಟದಲ್ಲಿ ಬಳಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಒಂದು ವೇಳೆ ಸಚಿವ ಸಂಪುಟದಲ್ಲಿ ಅವರಿಗೆ ಸ್ಥಾನ ನೀಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು. ಜೊತೆಗೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡಲು ರೈತರು ಹಾಗೂ ವಿವಿಧ ಸಂಘಟನೆಗಳು ಸಜ್ಜಾಗಲಿವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಭಾರತೀಯ ಕಿಸಾನ್ ಜಾಗೃತಿ ರೈತ ಸಂಘದ ಅಧ್ಯಕ್ಷ ಎಸ್.ಎ. ಖಾದ್ರಿ, ಉಪಾಧ್ಯಕ್ಷೆ ರತ್ನಮ್ಮ, ಕೊಟ್ಟಾಳ್ ವೀರೇಶ್ ಸೇರಿದಂತೆ ವಿವಿಧ ರೈತ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ಭಾಗವಹಿಸಿದ್ದರು.

Tags

protestzameer ahmed
share
ವಾರ್ತಾಭಾರತಿ
ವಾರ್ತಾಭಾರತಿ
Next Story
X