Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹೊಸಪೇಟೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ...

ಹೊಸಪೇಟೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಸಾರ್ವಜನಿಕರ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ5 July 2026 5:30 PM IST
share
ಹೊಸಪೇಟೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಸಾರ್ವಜನಿಕರ ಅಸಮಾಧಾನ

ಹೊಸಪೇಟೆ/ವಿಜಯನಗರ : ಜಿಲ್ಲೆಯ ಹೊಸಪೇಟೆ ನಗರದ ಎಂ.ಜೆ.ನಗರ ಸಮುದಾಯ ಭವನದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಸಾರ್ವಜನಿಕರಿಂದ ಹಲವು ಆಕ್ಷೇಪಗಳು ವ್ಯಕ್ತವಾಗಿವೆ. ಪ್ರಕ್ರಿಯೆಯು ನಿಯಮಬದ್ಧವಾಗಿ ಹಾಗೂ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿರುವ ಕೆಲವರು, ಬಡವರು, ಅನಕ್ಷರಸ್ಥರು, ಸ್ಲಂ ನಿವಾಸಿಗಳು ಹಾಗೂ ಸಮಾಜದ ಹಿಂದುಳಿದ ವರ್ಗದ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರ ಆರೋಪದ ಪ್ರಕಾರ, ಎಸ್‌ಐಆರ್ ಅರ್ಜಿಗಳನ್ನು ಒಂದೇ ಸ್ಥಳದಲ್ಲಿ ಸಂಗ್ರಹಿಸಿ ಭರ್ತಿ ಮಾಡಿಸಲಾಗುತ್ತಿದ್ದು, ಮನೆಮನೆಗೆ ತೆರಳಿ ಪರಿಶೀಲನೆ ನಡೆಸುವ ಉದ್ದೇಶ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಅಲ್ಲದೆ, ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಸಮರ್ಪಕ ಜಾಗೃತಿ ಮೂಡಿಸಲಾಗಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಅನಕ್ಷರಸ್ಥರು ಹಾಗೂ ದಿನನಿತ್ಯದ ಕೂಲಿ ಕೆಲಸದಲ್ಲಿ ತೊಡಗಿರುವ ಬಡ ಜನರಿಗೆ ಎಸ್‌ಐಆರ್ ಕುರಿತು ಅಗತ್ಯ ಮಾಹಿತಿ ತಲುಪುತ್ತಿಲ್ಲ. ಇದರಿಂದ ಅನೇಕ ಅರ್ಹ ಮತದಾರರು ಅಗತ್ಯ ದಾಖಲೆಗಳನ್ನು ಸಲ್ಲಿಸಲು ವಿಫಲವಾಗಿ ಮತದಾನದ ಹಕ್ಕಿನಿಂದ ವಂಚಿತರಾಗುವ ಅಪಾಯವಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ.

ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಸಮರ್ಪಕ ತರಬೇತಿ ನೀಡದಿರುವುದರಿಂದ ಅರ್ಜಿ ಸ್ವೀಕಾರ ಹಾಗೂ ಪರಿಶೀಲನಾ ಕಾರ್ಯದಲ್ಲಿ ಗೊಂದಲ ಉಂಟಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.

ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕು ಅತ್ಯಂತ ಮಹತ್ವದ್ದಾಗಿದ್ದು, ಆಡಳಿತಾತ್ಮಕ ಲೋಪಗಳಿಂದ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಚುನಾವಣಾ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಒಂದು ವೇಳೆ ಎಸ್‌ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾದರೆ ಕಾನೂನುಬದ್ಧ ಹೋರಾಟ ನಡೆಸುವುದಾಗಿ ಕೆಲ ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಚುನಾವಣಾ ಅಧಿಕಾರಿಗಳ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಲಭ್ಯವಾಗಬೇಕಿದೆ.

ಎಸ್‌ಐಆರ್ ಪ್ರಕ್ರಿಯೆಯ ಉದ್ದೇಶ ಒಳ್ಳೆಯದಾಗಿದ್ದರೂ, ಅದರ ಅನುಷ್ಠಾನದಲ್ಲಿ ಯಾವುದೇ ಅರ್ಹ ಮತದಾರರು ಅನ್ಯಾಯಕ್ಕೆ ಒಳಗಾಗಬಾರದು. ವಿಶೇಷವಾಗಿ ಅನಕ್ಷರಸ್ಥರು, ಕೂಲಿ ಕಾರ್ಮಿಕರು, ಸ್ಲಂ ನಿವಾಸಿಗಳು ಹಾಗೂ ಸಮಾಜದ ಹಿಂದುಳಿದ ವರ್ಗದವರಿಗೆ ಸಮರ್ಪಕ ಮಾಹಿತಿ ಮತ್ತು ನೆರವು ಒದಗಿಸಬೇಕು. ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕು ಸಂವಿಧಾನ ನೀಡಿರುವ ಅಮೂಲ್ಯ ಹಕ್ಕಾಗಿದ್ದು, ಅಧಿಕಾರಿಗಳು ಪಾರದರ್ಶಕತೆ ಹಾಗೂ ಜವಾಬ್ದಾರಿಯಿಂದ ಎಸ್‌ಐಆರ್ ಪ್ರಕ್ರಿಯೆ ನಡೆಸಬೇಕು. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿದರೆ ಸಾರ್ವಜನಿಕರು ಒಗ್ಗಟ್ಟಿನಿಂದ ಕಾನೂನುಬದ್ಧ ಹೋರಾಟ ನಡೆಸಬೇಕಾದ ಪರಿಸ್ಥಿತಿ ಎದುರಾಗಬಹುದು.

– ಸ್ಥಳೀಯ ನಿವಾಸಿ ಪಿ. ವೆಂಕಟೇಶ್


Tags

Hosapete
share
ವಾರ್ತಾಭಾರತಿ
ವಾರ್ತಾಭಾರತಿ
Next Story
X