Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಸ್ವಾತಂತ್ರ್ಯ ಹೋರಾಟಗಾರರನ್ನು...

ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ಆದ್ಯ ಕರ್ತವ್ಯವಾಗಲಿ : ಸಚಿವ ಝಮೀರ್‌ ಅಹ್ಮದ್ ಖಾನ್

ವಾರ್ತಾಭಾರತಿವಾರ್ತಾಭಾರತಿ15 Aug 2025 5:45 PM IST
share
ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ಆದ್ಯ ಕರ್ತವ್ಯವಾಗಲಿ : ಸಚಿವ ಝಮೀರ್‌ ಅಹ್ಮದ್ ಖಾನ್

ವಿಜಯನಗರ (ಹೊಸಪೇಟೆ), ಆ.15 : ದೇಶದ ಸ್ವಾತಂತ್ರ್ಯಕ್ಕಾಗಿ ಬ್ರೀಟಿಷರ ವಿರುದ್ಧ ಹೋರಾಟ ಮಾಡಿದ ಎಲ್ಲಾ ವೀರಯೋಧರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಝಮೀರ್ ಅಹ್ಮದ್ ಖಾನ್ ಅವರು ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹೊಸಪೇಟೆ ನಗರಸಭೆ ಸಹಯೋಗದಲ್ಲಿ 79ನೇ ಸ್ವಾತಂತ್ರ್ಯೋತ್ಸವವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೇರವೇರಿಸಿ, ಮಹಾತ್ಮ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಶುಕ್ರವಾರ ಮಾತನಾಡಿದರು,

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಬ್ರೀಟಿಷರ ವಿರುದ್ಧ ಹೋರಾಟ ನಡೆಸಿ ರಾಷ್ಟ್ರಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟ ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಭಾಯಿ ಪಟೇಲ್, ನೆಹರು, ಸುಭಾಷ್ ಚಂದ್ರಬೋಸ್, ಅಬ್ದುಲ್ ಕಲಾಂ ಆಜಾದ್, ಭಗತ್ ಸಿಂಗ್, ಚಂದ್ರಶೇಖರ ಅಜಾದ್, ರಾಜ್ ಗುರು, ಸುಖ್ ದೇವ್ ಸೇರಿದಂತೆ ಸಾವಿರಾರು ವೀರಯೋಧರನ್ನು ಇಂದು ನಾವು ನೆನಪಿಸಿಕೊಳ್ಳಬೇಕು.

ರಾಜ್ಯ ಸರ್ಕಾರ ಆಡಳಿತಕ್ಕೆ ಬಂದು ಎರಡು ವರ್ಷ, ಎರಡು ತಿಂಗಳು ಪೂರೈಸಿದೆ. ಭರವಸೆ ನೀಡಿದ್ದ ಐದು ಗ್ಯಾರಂಟಿಗಳನ್ನು ಒಂದೇ ತಿಂಗಳಲ್ಲಿ ಅನುಷ್ಠಾನಗೊಳಿಸಿರುವುದು ಹೆಮ್ಮೆಯ ವಿಷಯ. ಗ್ಯಾರಂಟಿ ಯೋಜನೆಗಳ ಬಗ್ಗೆ ಅನೇಕ ಟೀಕೆಗಳು ಬಂದಿದ್ದವು. ಬಡವರಿಗೆ ಮನೆಗಳನ್ನು ಕಟ್ಟಿಕೊಡುವ ಆರನೇ ಗ್ಯಾರಂಟಿಯನ್ನು ನಾವು ಘೋಷಣೆ ಮಾಡಿರಲಿಲ್ಲ. ಆದರೆ ಅದು ಬಡಜನರ, ವಸತಿ ರಹಿತರ ಕಾಳಜಿಗೆ ವಿಶೇಷವಾಗಿ ಮನೆಗಳನ್ನು ನೀಡುವ ಚಿಂತನೆ ಮಾಡಲಾಗಿದೆ. ಸ್ಲಂ ಬೋರ್ಡ್ ನಿಂದ 1,80,253 ಮನೆಗಳು ಮತ್ತು ರಾಜೀವ ಗಾಂಧಿ ವಸತಿ ನಿಗಮದಿಂದ 47,860 ಮನೆಗಳು ಸೇರಿ 2,30,000 ಮನೆಗಳನ್ನು ಈ ಹಿಂದಿನ ನಮ್ಮ ಸರ್ಕಾರದಲ್ಲಿ ಮಂಜೂರು ಮಾಡಲಾಗಿತ್ತು, ಇವುಗಳು ಕಾರಣಾಂತರದಿಂದ ಹಂಚಿಕೆಯಾಗಲಿಲ್ಲ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಮಂಜೂರು ಮಾಡಲಾಗುತ್ತದೆ. ವಸತಿ ರಹಿತರ ಸಮಸ್ಯೆಗಳಿಗೆ ಸ್ಪಂದಿಸಿ ಈಗಾಗಲೇ 36,799 ಮನೆಗಳನ್ನು ನೀಡಿ ಇದಕ್ಕಾಗಿ 500 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. 2026 ರ ಅಂತ್ಯದೊಳಗೆ ಫಲಾನುಭವಿಗಳಿಗೆ ಪೂರ್ಣ ಪ್ರಮಾಣದಲ್ಲಿ ಸೂರು ಒದಗಿಸುವ ಯೋಜನೆಗೆ ಅನುದಾನ ನೀಡುವುದಾಗಿ ಸಿಎಂ ಸಿದ್ದರಾಮಯ್ಯನವರು ಭರವಸೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ, ಮಧ್ಯಮ ವರ್ಗದವರಿಗೆ ಸಾಕಷ್ಟು ಅನುಕೂಲಗಳಾಗಿದ್ದು, ಯಾವುದೇ ಕಾರಣಕ್ಕೂ ಯೋಜನೆಗಳು ಸ್ಥಗಿತವಾಗುವುದಿಲ್ಲ. ಈ ಯೋಜನೆಗಳಿಂದ ಜನರಿಗೆ ಸಾಕಷ್ಟು ಅನುಕೂಲವಾಗಿದ್ದು, ಆರ್ಥಿಕ ಮಟ್ಟ ಸುಧಾರಣೆಯಾಗಿದೆ ಎಂದರು.

ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ ವಿತರಣೆ :

ವೇದಿಕೆಯಲ್ಲಿ 2024ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರಾದ ಹೊಸಪೇಟೆ ತಹಶೀಲ್ದಾರ್‌ ಎಂ.ಶೃತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಂಜುನಾಥ, ಹಗರಿಬೊಮ್ಮನಹಳ್ಳಿ ಬಿಇಒ ಮೈಲೇಶ್ ಬೇವೂರು, ಜಿಲ್ಲಾ ನಗರಾಭಿವೃದ್ಧಿ ಕೋಶ ಜೆಇ ವೀರೇಶ್, ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆ ವೈದ್ಯ ಡಾ.ಸೋಮಶೇಖರ್, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಕಾರ್ಯ ನಿರ್ವಾಹಕ ಅಧಿಕಾರಿ ಹನುಮಂತಪ್ಪ, ಹೊಸಪೇಟೆ ಗ್ರಾಮ ಆಡಳಿತ ಅಧಿಕಾರಿ ಚಂದನಾ ಪವಾರ್, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಶೂಶ್ರಷಕಿ ವೀಣಾ, ಅಂಕಸಮುದ್ರ ಗ್ರಾಮ ಆಡಳಿತ ಅಧಿಕಾರಿ ಯಂಕಾರೆಡ್ಡಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಂಕರ ನಾಯ್ಕ ಹಾಗೂ 2025 ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರಾದ ಹೊಸಪೇಟೆ ಸಹಾಯಕ ಆಯುಕ್ತರಾದ ಪಿ.ವಿವೇಕಾನಂದ, ಹರಪನಹಳ್ಳಿ ತಾಲೂಕು ಚಟ್ನಿಹಳ್ಳಿ ಪಿಡಿಒ ಹೆಚ್.ಸಂಗಪ್ಪ, ಮಗಿಮಾವಿನಹಳ್ಳಿ ಪಿಹೆಚ್‌ಸಿ ವೈದ್ಯೆ ಡಾ.ಅನುಷಾ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ, ಉಚ್ಚಂಗಿದುರ್ಗದ ಉಚ್ಚಂಗಿದೇವಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಪ್ಪ, ಹರಪನಹಳ್ಳಿ ತಹಶೀಲ್ದಾರ ಗಿರೀಶ್ ಬಾಬು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮನೋಹರಗೌಡ, ಜಿಲ್ಲಾಧಿಕಾರಿ ಕಚೇರಿ ಗ್ರಾಮ ಆಡಳಿತ ಅಧಿಕಾರಿ ಸವಿತಾ, ಜಿಪಂ ಯೋಜನಾಧಿಕಾರಿ ಜೆ.ಎಂ.ಅನ್ನದಾನಸ್ವಾಮಿ, ಡಿಯುಡಿಸಿ ಯೋಜನಾ ನಿರ್ದೇಶಕ ಮನೋಹರ ಇವರುಗಳನ್ನು ಗೌರವಿಸಿ ಸನ್ಮಾನಿಸಲಾಯಿತು.

ಆಕರ್ಷಕ ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು :

ಪರೇಡ್ ಕಮಾಂಡರ್ ಗೋವಿಂದ್ ನೇತೃತ್ವದಲ್ಲಿ ಪೊಲೀಸ್, ಗೃಹರಕ್ಷದಳ, ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ಪೌರಕಾರ್ಮಿಕರು ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಒಳಗೊಂಡಂತೆ ಆಕರ್ಷಕ ಪಥಸಂಚಲನ ನಡೆಯಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಕಾರ್ಯಕ್ರಮದಲ್ಲಿ ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ ಅಧ್ಯಕ್ಷತೆ ವಹಿಸಿದ್ದರು. ಹೊಸಪೇಟೆ ನಗರಸಭೆ ಅಧ್ಯಕ್ಷರಾದ ಎನ್.ರೂಪೇಶ್ ಕುಮಾರ್, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ.ಶಿವಮೂರ್ತಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ವೇದಿಕೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X