Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಅಸಮತೋಲನ ನಿವಾರಣೆ ಕುರಿತು ಪರಾಮರ್ಶೆ:...

ಅಸಮತೋಲನ ನಿವಾರಣೆ ಕುರಿತು ಪರಾಮರ್ಶೆ: ಪ್ರೊ.ಎಂ.ಗೋವಿಂದರಾವ್

ವಾರ್ತಾಭಾರತಿವಾರ್ತಾಭಾರತಿ18 Jun 2025 9:17 PM IST
share
ಅಸಮತೋಲನ ನಿವಾರಣೆ ಕುರಿತು ಪರಾಮರ್ಶೆ: ಪ್ರೊ.ಎಂ.ಗೋವಿಂದರಾವ್

ವಿಜಯನಗರ(ಹೊಸಪೇಟೆ): ಜಿಲ್ಲೆಯಲ್ಲಿ ಯಾವ ರೀತಿಯ ಬದಲಾವಣೆ ಅಗತ್ಯವಿದೆ. ಅಭಿವೃದ್ಧಿ ಸೇರಿ ವಿವಿಧ ವಲಯಗಳ ಸೂಚ್ಯಂಕ ಆಧರಿಸಿ ಗುರುತಿಸಿ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪರಾಮರ್ಶಿಸಿ ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷರಾದ ಪ್ರೊ.ಎಂ. ಗೋವಿಂದರಾವ್ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಬುಧವಾರ ಮಾತನಾಡಿದರು,

ಡಾ.ಡಿ.ಎಂ. ನಂಜುಂಡಪ್ಪನವರ 2002ರ ವರದಿಯಲ್ಲಿ ಅಂದಿನ 176 ತಾಲೂಕುಗಳನ್ನು ಹಿಂದುಳಿದ, ಅತಿ ಹಿಂದುಳಿದ, ಅತ್ಯಂತ ಹಿಂದುಳಿದ ಹಾಗೂ ಅಭಿವೃದ್ದಿ ಹೊಂದಿದ ತಾಲೂಕುಗಳೆಂದು 4 ವರ್ಗದಲ್ಲಿ ವರ್ಗೀಕರಿಸಿ ಅದಕ್ಕನುಗುಣವಾಗಿ ಅನುದಾನ ಹಂಚಿಕೆಗೆ ಶಿಫಾರಸ್ಸು ಮಾಡಿದ್ದರು. ಇದರ ಅನ್ವಯ ಗುರುತಿಸಲಾದ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಸರ್ಕಾರ 31 ಸಾವಿರ ಕೋಟಿ ರೂ. ವೆಚ್ಚ ಮಾಡಿದೆ. ಅಸಮತೋಲನ ಹೆಚ್ಚಾದಾಗ ಪ್ರದೇಶಗಳು ಹಿಂದುಳಿಯಲಿವೆ. ನಂಜುAಡಪ್ಪ ವರದಿ ಅನುಷ್ಠಾನದಿಂದ ಹೇಗೆ ಅಭಿವೃದ್ದಿಯಾಗಿದೆ ಎಂಬುದನ್ನು ಸೂಚ್ಯಂಕದ ಅಧಾರದ ಮೇಲೆ ಗುರುತಿಸಲಾಗುತ್ತದೆ. ನಿಜಕ್ಕೂ ಹಿಂದುಳಿದಿದ್ದರೇ, ಯಾವ ಕಾರಣಕ್ಕಾಗಿ ಯಾವ ಕ್ಷೇತ್ರದಲ್ಲಿ ಹಿಂದುಳಿದಿದೆ ಎಂಬುದನ್ನು ಸಮಿತಿಯು ಪರಾಮರ್ಶಿಸಲಿದೆ. ತಲಾ ಆದಾಯ, ಶಿಕ್ಷಣ, ಆರೋಗ್ಯ ಇನ್ನಿತರ ಕ್ಷೇತ್ರಗಳಲ್ಲಿನ ಸುಧಾರಣೆ, ಬೆಳವಣಿಗೆಯ ಬಗ್ಗೆಯು ಸಮಿತಿಯು ಪರಿಶೀಲಿಸಲಿದೆ. ರಾಜ್ಯ ಸರ್ಕಾರ 2024 ಸೆಪ್ಟಂಬರ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಆರ್ಥಿಕ ತಜ್ಞರನ್ನೊಳಗೊಂಡ ಸಮಿತಿ ರಚಿಸಿದ್ದು, ಈ ಸಮಿತಿಯು ಕೃಷಿ, ಕೈಗಾರಿಕೆ, ಆರ್ಥಿಕ ಮೂಲ ಸೌಲಭ್ಯ, ಸಾಮಾಜಿಕ ಸೌಲಭ್ಯ, ಹಣಕಾಸಿನ ಮತ್ತು ತಾಂತ್ರಿಕ ಮೂಲಸೌಲಭ್ಯ ಮುಂತಾದ ವಲಯಗಳ ಅಭಿವೃದ್ಧಿಯನ್ನು ಗುರುತಿಸಿ ಸೂಚ್ಯಂಕ ನಿಗಧಿಪಡಿಸಲಿದೆ. ಬಳಿಕ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸುತ್ತದೆ. ಜಿಲ್ಲೆಯಲ್ಲಿ ಕೈಗಾರಿಕಾ ಅಭಿವೃದ್ಧಿ ಬಹಳ ಮುಖ್ಯವಾಗಿದೆ. ಇಲ್ಲಿನ ಯುವಕರಿಗೆ ಉದ್ಯೋಗ ದೊರೆಯುವಂತೆ ಮಾಡುವುದು ಹಾಗೂ ವಲಸೆ ಹೋಗುವುದನ್ನು ಕಡಿಮೆ ಮಾಡುವುದು ಬಹಳ ಮುಖ್ಯವಾಗಿದೆ ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಮಾತನಾಡಿ, ಕೂಡ್ಲಿಗಿ ಕ್ಷೇತ್ರದಲ್ಲಿ ಹಿಂದುಳಿದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಶಾಲೆಗಳಲ್ಲಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಅಗತ್ಯ ನುರಿತ ಶಿಕ್ಷಕರ ನೇಮಕವಾಗಬೇಕಿದೆ. ಯುವಕ, ಯುವತಿಯರಿಗೆ ಕೌಶಲ್ಯ ಅಭಿವೃದ್ದಿ ತರಬೇತಿಗಳು ಹೆಚ್ಚಿಸುವ ಮೂಲಕ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ನೀಡಬೇಕಿದೆ. ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳು, ಅರಣ್ಯಧಾಮಗಳಿರುವುದರಿಂದ ಪ್ರವಾಸೋದ್ಯಮ ಅಭಿವೃದ್ದಿಗೆ ಆದ್ಯತೆ ನೀಡಬೇಕಿದೆ ಎಂದರು.

ಹರಪನಹಳ್ಳಿ ಶಾಸಕರಾದ ಲತಾ ಮಲ್ಲಿಕಾರ್ಜುನ್ ಮಾತನಾಡಿ, ಉದ್ಯೋಗಕ್ಕಾಗಿ ಬೇರೆ ಕಡೆ ಸ್ಥಳೀಯರು ಹೋಗುವುದನ್ನು ತಡೆಯಬೇಕಿದೆ. ನಗರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಹೆಚ್ಚಾಗಿದೆ. ನಮ್ಮಲ್ಲಿ 38 ತಾಂಡಗಳಿವೆ. ತಾಂಡಗಳ ಅಭಿವೃದ್ದಿಯಾಗಬೇಕು. ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಅದ್ಯತೆ ನೀಡಬೇಕು. ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದ್ದು, ಪರಿಹರಿಸಲು ಮುಂದಾಗಬೇಕು. ಉದ್ಯೋಗ ಸೃಷ್ಟಿ, ರೈತರಿಗೆ ನೆರವು, ಆರೋಗ್ಯ ಕ್ಷೇತ್ರದ ಸುಧಾರಣೆಯಾಗಬೇಕಿದೆ ಎಂದು ಸಮಿತಿಯ ಗಮನಕ್ಕೆ ತಂದರು.

ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ ಮಾತನಾಡಿ, ಜಿಲ್ಲೆಯ ಅರ್ಥಿಕ ಅಭಿವೃದ್ದಿಗೆ ಪ್ರವಾಸೋದ್ಯಮದ ಬಹಳ ಮುಖ್ಯವಾಗಿದೆ. ಪ್ರವಾಸಿತಾಣ ಹಂಪಿ ಸೇರಿ ವಿವಿಧ ಕ್ಷೇತ್ರಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆ ಸೇರಿ ವಿವಿಧ ಕಾರ್ಖನೆಗಳನ್ನು ಸ್ಥಾಪಿಸಬೇಕಿದೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಉದ್ಯೋಗ ಸೃಷ್ಠಿ, ನೀರಾವರಿಗೆ ಗಮನಹರಿಸಬೇಕಿದೆ. ಜಿಲ್ಲಾ ಕೇಂದ್ರದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಳು, ವೈದಕೀಯ ಕಾಲೇಜು, ಸಣ್ಣ ಉದ್ಯಮಗಳಿಗೂ ಹೆಚ್ಚಿನ ಉತ್ತೇಜನ ನೀಡಬೇಕು. ಶಿಕ್ಷಣ ಸಂಸ್ಥೆಗಳಿಗೆ ಮೂಲ ಸೌಕರ್ಯ, ವಿದ್ಯಾರ್ಥಿಗಳಿಗೆ ಕ್ರೀಡಾ ಕ್ಷೇತ್ರದಲ್ಲಿ ಪ್ರೋತ್ಸಾಹ, ಕೃಷಿ ಆಧಾರಿತ ಕೈಗಾರಿಕೆಗಳು, ರೇಷ್ಮೆ ಅಭಿವೃದ್ದಿ ಪುನಶ್ಚೇತನ ಕಾರ್ಯಗಳಲ್ಲಿ ಪ್ರಗತಿ ಸಾಧಿಸಬೇಕಿದೆ ಎಂದರು.

ಈ ವೇಳೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಸದಸ್ಯರಾದ ಪ್ರೊ.ಡಾ.ಎಸ್.ಟಿ.ಬಾಗಲಕೋಟೆ, ಡಾ.ಸಂಗೀತಾ ಕಟ್ಟಿ ವೇದಿಕೆಯಲ್ಲಿದ್ದರು. ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಚಿದಾನಂದ್ ಪೂಜಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶ್ವೇತಾ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಂಕರನಾಯ್ಕ.ಎಲ್.ಆರ್, ಆರ್‌ಸಿಹೆಚ್ ಅಧಿಕಾರಿ ಡಾ.ಜಂಬಯ್ಯ, ಶಿಕ್ಷಣ ಇಲಾಖೆ ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಹೆಚ್.ವಿ.ಮಂಜುನಾಥ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X