Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagar | ವಸತಿ-ನಿವೇಶನ ರಹಿತರ...

Vijayanagar | ವಸತಿ-ನಿವೇಶನ ರಹಿತರ ಪಟ್ಟಿ ಪರಿಷ್ಕರಣೆಗೆ ಜೂನ್ 30ರವರೆಗೆ ಅವಕಾಶ : ಮುಹಮ್ಮದ್ ಅಲಿ ಅಕ್ರಂ ಷಾ

ವಾರ್ತಾಭಾರತಿವಾರ್ತಾಭಾರತಿ12 Jun 2026 5:46 PM IST
share
Vijayanagar | ವಸತಿ-ನಿವೇಶನ ರಹಿತರ ಪಟ್ಟಿ ಪರಿಷ್ಕರಣೆಗೆ ಜೂನ್ 30ರವರೆಗೆ ಅವಕಾಶ : ಮುಹಮ್ಮದ್ ಅಲಿ ಅಕ್ರಂ ಷಾ

ವಿಜಯನಗರ (ಹೊಸಪೇಟೆ), ಜೂನ್ 12: 2018ರ ವಸತಿ ಮತ್ತು ನಿವೇಶನ ರಹಿತರ ಸಮೀಕ್ಷಾ ಪಟ್ಟಿಯಲ್ಲಿ ಬಿಟ್ಟುಹೋಗಿರುವ ಅರ್ಹ ಫಲಾನುಭವಿಗಳನ್ನು ಸೇರ್ಪಡೆಗೊಳಿಸಲು ಹಾಗೂ ಪಟ್ಟಿಯನ್ನು ಪರಿಷ್ಕರಿಸಲು ಜೂನ್ 30ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮುಹಮ್ಮದ್ ಅಲಿ ಅಕ್ರಂ ಷಾ ತಿಳಿಸಿದ್ದಾರೆ.

ರಾಜೀವ್ ಗಾಂಧಿ ವಸತಿ ನಿಗಮದ ನಿರ್ದೇಶನದಂತೆ ಈ ಕಾರ್ಯವನ್ನು ಅತ್ಯಂತ ತುರ್ತಾಗಿ ಪರಿಗಣಿಸಿ ಆಂದೋಲನದ ಮಾದರಿಯಲ್ಲಿ ಕೈಗೆತ್ತಿಕೊಳ್ಳುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಪಟ್ಟಿಯಲ್ಲಿರುವ ಅನರ್ಹರನ್ನು ಸೂಕ್ತ ಕಾರಣಗಳೊಂದಿಗೆ ಗುರುತಿಸಿ ಕೈಬಿಡುವುದು ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ಈಗಾಗಲೇ ಮನೆ ಪಡೆದಿರುವ ಫಲಾನುಭವಿಗಳ ವಸತಿ ವರ್ಷ ಮತ್ತು ಎಒ (AO) ಸಂಖ್ಯೆಯನ್ನು ನಮೂದಿಸಿ ಪಟ್ಟಿಯಿಂದ ಹೊರಗಿಡುವಂತೆ ಸೂಚಿಸಲಾಗಿದೆ.

ಈ ಹಿಂದೆ ಎರಡು ಬಾರಿ ಅವಕಾಶ ನೀಡಿದ್ದರೂ ನಿರೀಕ್ಷಿತ ಮಟ್ಟದ ಪ್ರಗತಿ ಸಾಧಿಸಲಾಗಿಲ್ಲ ಎಂದು ಸಿಇಒ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೂನ್ 30ರ ನಂತರ ಪರಿಷ್ಕೃತ ಪಟ್ಟಿಯನ್ನೇ ಅಂತಿಮ ಎಂದು ಪರಿಗಣಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ, ಅಂತಿಮ ಪಟ್ಟಿಯಲ್ಲಿ ಅನರ್ಹರನ್ನು ಉಳಿಸಿಕೊಂಡಿರುವುದು ಅಥವಾ ಅರ್ಹರನ್ನು ಕೈಬಿಟ್ಟಿರುವುದು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಎಚ್ಚರಿಕೆ ನೀಡಿದ್ದಾರೆ.

Tags

Vijayanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X