Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ: ಅಲ್ಪಸಂಖ್ಯಾತ ಸಮುದಾಯಕ್ಕಾಗಿ...

ವಿಜಯನಗರ: ಅಲ್ಪಸಂಖ್ಯಾತ ಸಮುದಾಯಕ್ಕಾಗಿ ಜಾರಿಗೊಳಿಸಲಾದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಡಿಸಿ ಎಂ.ಎಸ್.ದಿವಾಕರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ2 Aug 2025 11:51 PM IST
share
ವಿಜಯನಗರ: ಅಲ್ಪಸಂಖ್ಯಾತ ಸಮುದಾಯಕ್ಕಾಗಿ ಜಾರಿಗೊಳಿಸಲಾದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಡಿಸಿ ಎಂ.ಎಸ್.ದಿವಾಕರ್ ಸೂಚನೆ

ವಿಜಯನಗರ(ಹೊಸಪೇಟೆ): ಅಲ್ಪಸಂಖ್ಯಾತರ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಸಾಧಿಸಲು ವಿವಿಧ ಇಲಾಖೆಗಳಲ್ಲಿ ಸರ್ಕಾರದಿಂದ ನೀಡಲಾಗುತ್ತಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಶನಿವಾರ ಮಾತನಾಡಿದರು.

ಅಲ್ಪ ಸಂಖ್ಯಾತರಿಗೆ ಶೈಕ್ಷಣಿಕ ಅವಕಾಶಗಳನ್ನು ಹೆಚ್ಚಿಸುವ ಹಾಗೂ ಆರ್ಥಿಕ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಸಮಾನ ಹಂಚಿಕೆ, ಅಲ್ಪಸಂಖ್ಯಾತರ ಜೀವನ ಮಟ್ಟ ಸುಧಾರಣೆಗಾಗಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮವನ್ನು ಸಮರ್ಪಕವಾಗಿ ಜಾರಿಗೆ ತರಬೇಕಿದೆ. ಅಲ್ಪಸಂಖ್ಯಾತರ ಶೈಕ್ಷಣಿಕ ಅವಕಾಶಗಳನ್ನು ಹೆಚ್ಚಿಸಲು ಐಸಿಡಿಎಸ್ ಸೇವೆಗಳನ್ನು ಸಮಾನವಾಗಿ ದೊರೆಯುವಂತೆ ಮಾಡಬೇಕು. ಉರ್ದು ಶಿಕ್ಷಣಕ್ಕೆ ಹೆಚ್ಚಿನ ಸಂಪನ್ಮೂಲ ಒದಗಿಸುವುದು ಹಾಗೂ ಶಿಕ್ಷಣ ಸೌಲಭ್ಯಗಳನ್ನು ಕಲ್ಪಿಸುವುದು ಮುಖ್ಯವಾಗಿದೆ. ತಂತ್ರಜ್ಞಾನ ತರಬೇತಿ ಮೂಲಕ ಕೌಶಲ್ಯ ಕಾರ್ಯಕ್ರಮಗಳನ್ನು ತಲುಪಿಸುವುದು. ಆರ್ಥಿಕ ಚಟುವಟಿಕೆ ಬಲಪಡಿಸಲು ಸಾಲ ಸೌಲಭ್ಯ ಕಲ್ಪಿಸುವುದು, ನಾಗರಿಕ ಸೇವೆಗಳ ಬಗ್ಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳುವುದು, ಅಲ್ಪಸಂಖ್ಯಾತರ ಜೀವನ ಮಟ್ಟ ಸುಧಾರಿಸಲು ವಸತಿ ಯೋಜನೆ ಕಲ್ಪಿಸುವುದು. ಹೀಗೆ ಹಲವು ಕಾರ್ಯಕ್ರಮಗಳು ಬಗ್ಗೆ ನಿರ್ದೇಶನ ನೀಡಿದರು.

15 ಅಂಶಗಳ ಕಾರ್ಯಕ್ರಮಗಳಲ್ಲಿ ಸಂಬಂಧ ಪಡುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲಾ ಸೌಕರ್ಯಗಳನ್ನು ನೀಡಬೇಕು. ಶಿಕ್ಷಣ ಇಲಾಖೆಯಲ್ಲಿ ಬರುವ ಸಮವಸ್ತ್ರ, ಉಚಿತ ಪಠ್ಯ ಪುಸ್ತಕ ಮತ್ತು ವಿದ್ಯಾರ್ಥಿ ವೇತನ ಮತ್ತಿತರ ಸೌಲಭ್ಯಗಳು ಕಲ್ಪಿಸಬೇಕು. ಕೃಷಿ ಇಲಾಖೆಯಲ್ಲಿ ಬರುವ ಸೂಕ್ಷ್ಮ ನೀರಾವರಿ, ಕೃಷಿ ಯಾಂತ್ರೀಕರಣ ಮತ್ತು ಬಿತ್ತನೆ ಬೀಜ ವಿತರಣಗೆ ಕ್ರಮ ವಹಿಸುವುದು.

ತೋಟಗಾರಿಕೆ ಇಲಾಖೆಯಲ್ಲಿ ಬರುವ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಸಾಕಾಣಿಕೆ, ರಾಷ್ಟ್ರೀಯ ಖಾದ್ಯ ತೈಲ ಅಭಿಯಾನದಡಿ ತಾಳೆಬೆಳೆ ಯೋಜನೆ ಅನುಷ್ಟಾನ ಸಹಾಯಧನ ಇನ್ನೂ ಬಾಕಿರುವ ಯೋಜನೆಗಳನ್ನು ನೀಡಬೇಕು ಎಂದು ಹೇಳಿದರು.

ಈ ವೇಳೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಟಾಯ್ ಮೋಹಮ್ಮದ ಅಲಿ ಅಕ್ರಮ್ ಷಾ, ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಶ್ವೇತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

minority communitiesVijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X