Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಸೆ.6ರಂದು ಹೊಸಪೇಟೆಯಲ್ಲಿ ‘ಕ್ರಾಂತಿಯ...

ಸೆ.6ರಂದು ಹೊಸಪೇಟೆಯಲ್ಲಿ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ)’ ವಿಚಾರಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ3 Sept 2026 6:29 PM IST
share
ಸೆ.6ರಂದು ಹೊಸಪೇಟೆಯಲ್ಲಿ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ)’ ವಿಚಾರಗೋಷ್ಠಿ

ಹೊಸಪೇಟೆ/ವಿಜಯನಗರ: ಪ್ರವಾದಿ ಮುಹಮ್ಮದ್ (ಸ) ಅವರ ಜೀವನಾದರ್ಶಗಳು ಹಾಗೂ ಅವರು ಸಾರಿದ ಶಾಂತಿ, ಮಾನವೀಯತೆ, ಕರುಣೆ ಮತ್ತು ಸಹೋದರತ್ವದ ಸಂದೇಶಗಳನ್ನು ಸಮಾಜಕ್ಕೆ ಪರಿಚಯಿಸುವ ಉದ್ದೇಶದಿಂದ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ)’ ವಿಷಯದ ಕುರಿತು ವಿಶೇಷ ವಿಚಾರಗೋಷ್ಠಿ ಆಯೋಜಿಸಲಾಗಿದೆ.

ಸೀರತ್ ಅಧ್ಯಯನದ ಅಂಗವಾಗಿ ಸೆಪ್ಟೆಂಬರ್ 6ರಂದು ಭಾನುವಾರ ಸಂಜೆ 5 ಗಂಟೆಗೆ ಸಂಕಲಾಪುರದ ವಿನಾಯಕನಗರ ಪಾರ್ಕ್‌ನಲ್ಲಿ ವಿಚಾರಗೋಷ್ಠಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಖ್ಯಾತ ಪ್ರವಚನಕಾರ ಅಕ್ಬರ್ ಅಲಿ ಉಡುಪಿ, ನಿರಂಜನ ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳು ಹಾಗೂ ರೆವರೆಂಡ್ ಫಾದರ್ ಭಗವಂತರಾಜ್ ಸೇರಿದಂತೆ ವಿವಿಧ ಧರ್ಮಗಳ ಧರ್ಮಗುರುಗಳು, ಸಮಾಜ ಸೇವಕರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.

ಪ್ರವಾದಿ ಮುಹಮ್ಮದ್ (ಸ) ಅವರ ಜೀವನ ಮತ್ತು ಸಂದೇಶಗಳಲ್ಲಿರುವ ಶಾಂತಿ, ಮಾನವೀಯತೆ, ಕರುಣೆ, ಪರಸ್ಪರ ಗೌರವ ಹಾಗೂ ಸಹಬಾಳ್ವೆಯ ಮೌಲ್ಯಗಳನ್ನು ಸಮಾಜದಲ್ಲಿ ಮತ್ತಷ್ಟು ಬಲಪಡಿಸುವುದು ವಿಚಾರಗೋಷ್ಠಿಯ ಪ್ರಮುಖ ಉದ್ದೇಶವಾಗಿದೆ. ವಿವಿಧ ಧರ್ಮಗಳು, ಸಮುದಾಯಗಳು ಹಾಗೂ ವರ್ಗಗಳ ನಡುವೆ ಪರಸ್ಪರ ಗೌರವ ಮತ್ತು ಸಾಮಾಜಿಕ ಸಾಮರಸ್ಯ ಬೆಳೆಸುವ ಕುರಿತು ಕಾರ್ಯಕ್ರಮದಲ್ಲಿ ವಿಚಾರ ವಿನಿಮಯ ನಡೆಯಲಿದೆ.

ಸಮಾಜದಲ್ಲಿ ಶಾಂತಿ, ಏಕತೆ ಮತ್ತು ಸೌಹಾರ್ದತೆಯ ಅಗತ್ಯತೆಯನ್ನು ಸಾರುವ ನಿಟ್ಟಿನಲ್ಲಿ ಪ್ರವಾದಿ ಮುಹಮ್ಮದ್ (ಸ) ಅವರ ಜೀವನಾದರ್ಶಗಳನ್ನು ಪರಿಚಯಿಸುವ ಪ್ರಯತ್ನ ಇದಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಯುವಕರು, ವಿವಿಧ ಸಮುದಾಯಗಳ ಪ್ರತಿನಿಧಿಗಳು ಹಾಗೂ ಶಾಂತಿ ಮತ್ತು ಸೌಹಾರ್ದತೆಯಲ್ಲಿ ಆಸಕ್ತಿ ಹೊಂದಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಮಾಅತೆ ಇಸ್ಲಾಮಿ ಹಿಂದ್, ಹೊಸಪೇಟೆ ಅಧ್ಯಕ್ಷ ಮುಹಮ್ಮದ್ ಅಝೀಝ್ ಮುಲ್ಲಾ ಮನವಿ ಮಾಡಿದ್ದಾರೆ.

Tags

Hosapete
share
ವಾರ್ತಾಭಾರತಿ
ವಾರ್ತಾಭಾರತಿ
Next Story
X