Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಎಸ್‌ಐಆರ್‌ | ಸರಿಯಾದ ದಾಖಲೆ ಸಲ್ಲಿಸದ...

ಎಸ್‌ಐಆರ್‌ | ಸರಿಯಾದ ದಾಖಲೆ ಸಲ್ಲಿಸದ ಮತದಾರರಿಗೆ ನೋಟಿಸ್; ಮನೆ ಮನೆಗೆ ತೆರಳಿ ಪರಿಶೀಲನೆ : ತಹಶೀಲ್ದಾರ್ ಅಮರೇಶ್

ವಾರ್ತಾಭಾರತಿವಾರ್ತಾಭಾರತಿ18 Sept 2026 8:56 PM IST
share
ಎಸ್‌ಐಆರ್‌ | ಸರಿಯಾದ ದಾಖಲೆ ಸಲ್ಲಿಸದ ಮತದಾರರಿಗೆ ನೋಟಿಸ್; ಮನೆ ಮನೆಗೆ ತೆರಳಿ ಪರಿಶೀಲನೆ : ತಹಶೀಲ್ದಾರ್ ಅಮರೇಶ್

ಕೊಟ್ಟೂರು (ವಿಜಯನಗರ), ಸೆ.19: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಸರಿಯಾದ ದಾಖಲೆಗಳನ್ನು ಸಲ್ಲಿಸದ ಮತದಾರರಿಗೆ ನೋಟಿಸ್ ನೀಡಲಾಗಿದ್ದು, ಹಂತ ಹಂತವಾಗಿ ವಿಚಾರಣೆ ನಡೆಸಿ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತಿದೆ ಎಂದು ತಹಶೀಲ್ದಾರ್ ಅಮರೇಶ್ ಜಿ.ಕೆ. ತಿಳಿಸಿದ್ದಾರೆ.

ಕೋಗಳಿ ಹೋಬಳಿಯ ವಿವಿಧ ಗ್ರಾಮಗಳು ಹಾಗೂ ಕೊಟ್ಟೂರು ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಪರಿಶೀಲನಾ ಕಾರ್ಯ ಭರದಿಂದ ನಡೆಯುತ್ತಿದೆ. ಮತದಾರರು ಸಲ್ಲಿಸಿದ ದಾಖಲೆಗಳು ಸೂಕ್ತವಾಗಿದ್ದು, ವಿವರಗಳು ಹೊಂದಾಣಿಕೆಯಾದಲ್ಲಿ ತಕ್ಷಣವೇ ಅನುಮೋದನೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಪಾರದರ್ಶಕತೆ ಕಾಪಾಡುವ ಉದ್ದೇಶದಿಂದ ವಿಚಾರಣೆ ವೇಳೆ ತಹಶೀಲ್ದಾರರ ಭಾವಚಿತ್ರ ಹಾಗೂ ಮತದಾರರ ಸಹಿ ಇರುವ ದಾಖಲೆಯ ಫೋಟೋವನ್ನು ಸ್ಥಳದಲ್ಲೇ BLO ಆ್ಯಪ್‌ಗೆ ಅಪ್‌ಲೋಡ್ ಮಾಡಲಾಗುತ್ತಿದೆ. ದಾಖಲೆಗಳಲ್ಲಿ ಕೊರತೆ ಕಂಡುಬಂದರೆ ಅಗತ್ಯ ದಾಖಲೆಗಳೊಂದಿಗೆ ಮತ್ತೊಮ್ಮೆ ಹಾಜರಾಗುವಂತೆ ಮತದಾರರಿಗೆ ಸೂಚಿಸಲಾಗುತ್ತಿದೆ.

ಕಚೇರಿಗೆ ಬರಲು ಸಾಧ್ಯವಾಗದ ಹಿರಿಯ ನಾಗರಿಕರು, ವಿಕಲಚೇತನರು ಹಾಗೂ ಅನಾರೋಗ್ಯ ಪೀಡಿತ ಮತದಾರರ ಮನೆಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ದಾಖಲೆ ಪರಿಶೀಲನೆ ನಡೆಸುತ್ತಿದೆ.

ಕೊಟ್ಟೂರಿನ ಹಳೇ ಊರಮ್ಮ ದೇವಸ್ಥಾನದ ಸಮೀಪದ ಮತಗಟ್ಟೆ ಸಂಖ್ಯೆ 254 ವ್ಯಾಪ್ತಿಯ 80 ವರ್ಷದ ಎಂ. ಕೊಟ್ರೇಶಪ್ಪ ಹಾಗೂ 45 ವರ್ಷದ ವಿಕಲಚೇತನರಾದ ಎಂ. ವಾಣಿಶ್ರೀ ಅವರ ಮನೆಗಳಿಗೆ ತಹಶೀಲ್ದಾರ್ ಅಮರೇಶ್ ಜಿ.ಕೆ. ಖುದ್ದು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ಅನುಮೋದನೆ ನೀಡಿದರು.

ವಯೋವೃದ್ಧರು, ವಿಕಲಚೇತನರು ಅಥವಾ ಅನಾರೋಗ್ಯದಿಂದ ಬಳಲುತ್ತಿರುವ ಮತದಾರರು ವಿಚಾರಣೆಗೆ ಕಚೇರಿಗೆ ಬರಲು ಅಸಾಧ್ಯವಾದರೆ, ಅವರ ಮನೆಗೇ ತೆರಳಿ ದಾಖಲೆ ಪರಿಶೀಲಿಸುವ ವ್ಯವಸ್ಥೆ ಮುಂದುವರಿಯಲಿದೆ ಎಂದು ತಹಶೀಲ್ದಾರ್ ಸ್ಪಷ್ಟಪಡಿಸಿದರು.

ಪರಿಶೀಲನಾ ಕಾರ್ಯದಲ್ಲಿ ಚುನಾವಣೆ ವಿಷಯ ನಿರ್ವಾಹಕ ಕೆ. ಮುಸ್ತಾಫ್, ಪಟ್ಟಣ ಪಂಚಾಯಿತಿ ಸಿಬ್ಬಂದಿ ಅಂಗಡಿ ಮಂಜುನಾಥ, ಬಿಎಲ್‌ಒ ಶಿವಾನಿ ಹಾಗೂ ಶಿಕ್ಷಕ ಮಹೇಶ್ ಭಾಗವಹಿಸಿದ್ದರು.

Tags

SIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X