Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ...

ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಸಿರಾಜ್ ಶೇಖ್ ಪುನರಾಯ್ಕೆ

ವಾರ್ತಾಭಾರತಿವಾರ್ತಾಭಾರತಿ14 Sept 2026 5:55 PM IST
share
ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಸಿರಾಜ್ ಶೇಖ್ ಪುನರಾಯ್ಕೆ

ಹೊಸಪೇಟೆ/ವಿಜಯನಗರ: ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಮಾಜಿ ಶಾಸಕ ಸಿರಾಜ್ ಶೇಖ್ ಅವರನ್ನು ಮತ್ತೊಮ್ಮೆ ನೇಮಕ ಮಾಡಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.

ಜಿಲ್ಲೆ ರಚನೆಯಾದಾಗಿನಿಂದಲೇ ಕಾಂಗ್ರೆಸ್ ಸಂಘಟನೆಯ ನೇತೃತ್ವ ವಹಿಸಿಕೊಂಡಿರುವ ಸಿರಾಜ್ ಶೇಖ್ ಅವರಿಗೆ ಸತತ ಎರಡನೇ ಅವಧಿಗೂ ಅಧ್ಯಕ್ಷ ಸ್ಥಾನ ನೀಡಿ ಪಕ್ಷದ ವರಿಷ್ಠರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ರಾಜಕೀಯ ವಲಯದಲ್ಲಿ ಸಕ್ರಿಯವಾಗಿರುವ ಅವರು ಕೆಪಿಸಿಸಿ ನಾಯಕರು ಹಾಗೂ ಹೈಕಮಾಂಡ್‌ನೊಂದಿಗೆ ಉತ್ತಮ ಸಮನ್ವಯ ಹೊಂದಿರುವುದು ಮರುನೇಮಕಾತಿಗೆ ಪ್ರಮುಖ ಕಾರಣ ಎನ್ನಲಾಗಿದೆ.

ಈ ಬಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಲವು ಆಕಾಂಕ್ಷಿಗಳು ಪೈಪೋಟಿ ನಡೆಸಿದ್ದರೂ, ಅಂತಿಮವಾಗಿ ಸಿರಾಜ್ ಶೇಖ್ ಅವರನ್ನೇ ಆಯ್ಕೆ ಮಾಡಲಾಗಿದೆ. ಈ ಮೂಲಕ ವಿಜಯನಗರ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಜವಾಬ್ದಾರಿ ಮತ್ತೆ ಅವರ ಹೆಗಲೇರಿದೆ.

ಮಾಜಿ ಶಾಸಕರಾಗಿ ರಾಜಕೀಯ ಅನುಭವ ಹೊಂದಿರುವ ಸಿರಾಜ್ ಶೇಖ್ ಜಿಲ್ಲೆಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಮರುನೇಮಕಾತಿಯಿಂದ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದೆ.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವುದು, ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಸಿರಾಜ್ ಶೇಖ್ ಅವರ ಮುಂದಿರುವ ಪ್ರಮುಖ ಸವಾಲಾಗಿದೆ.

Tags

Congressvijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X