Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಹಂಪಿಯ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ...

ಹಂಪಿಯ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಿರಿ: ಡಿಸಿ ಕವಿತಾ ಮನ್ನಿಕೇರಿ ಕರೆ

ವಾರ್ತಾಭಾರತಿವಾರ್ತಾಭಾರತಿ16 Jun 2026 7:47 PM IST
share
ಹಂಪಿಯ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಿರಿ: ಡಿಸಿ ಕವಿತಾ ಮನ್ನಿಕೇರಿ ಕರೆ
ಪ್ರವಾಸಿ ಮಾರ್ಗದರ್ಶಿಗಳಿಗೆ ವಿದೇಶಿ ಭಾಷಾ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ವಿಜಯನಗರ/ಹೊಸಪೇಟೆ (ಕಮಲಾಪುರ): ಪ್ರವಾಸೋದ್ಯಮ ಇಲಾಖೆಯು ಮಾರ್ಗದರ್ಶಿಗಳ ಕಲ್ಯಾಣಕ್ಕೆ ಸದಾ ಬದ್ಧವಾಗಿದ್ದು, ವಿದೇಶಿ ಭಾಷಾ ತರಬೇತಿಯ ಸದುಪಯೋಗ ಪಡೆದು ವಿಜಯನಗರ ಸಾಮ್ರಾಜ್ಯದ ಗತವೈಭವ ಹಾಗೂ ಹಂಪಿಯ ಕೀರ್ತಿಯನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಕರೆ ನೀಡಿದರು.

ಪ್ರವಾಸೋದ್ಯಮ ಇಲಾಖೆ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಕನ್ನಡ ವಿಶ್ವವಿದ್ಯಾಲಯದ ಭುವನವಿಜಯ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರವಾಸಿ ಮಾರ್ಗದರ್ಶಿಗಳ ವಿದೇಶಿ ಭಾಷಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದೇಶಿ ಪ್ರವಾಸಿಗರು ಜಿಲ್ಲೆಗೆ ಆಗಮಿಸಿದಾಗ ಮೊದಲು ಸಂಪರ್ಕಿಸುವವರು ಮಾರ್ಗದರ್ಶಿಗಳೇ ಆಗಿದ್ದಾರೆ. ಅವರ ನಡವಳಿಕೆ, ಪ್ರಾಮಾಣಿಕತೆ ಮತ್ತು ಆತ್ಮೀಯತೆ ಈ ನೆಲ, ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಪ್ರವಾಸಿಗರ ಅಭಿಪ್ರಾಯವನ್ನು ರೂಪಿಸುತ್ತದೆ. ಹೀಗಾಗಿ ವೃತ್ತಿಪರತೆ ಕಾಪಾಡಿಕೊಂಡು ಪ್ರವಾಸಿಗರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಹಂಪಿಯ ಇತಿಹಾಸ, ಕಲೆ, ವಾಸ್ತುಶಿಲ್ಪ ಹಾಗೂ ಸಂಸ್ಕೃತಿಯನ್ನು ಪರಿಚಯಿಸುವಾಗ ಸಂಶೋಧನಾಧಾರಿತ ಮತ್ತು ಅಧಿಕೃತ ಮಾಹಿತಿಯನ್ನಷ್ಟೇ ನೀಡಬೇಕು. ಯಾವುದೇ ಕಾಲ್ಪನಿಕ ಕಥೆಗಳಿಗೆ ಆಸ್ಪದ ನೀಡಬಾರದು ಎಂದು ಅವರು ಸೂಚಿಸಿದರು.

ಫ್ರಾನ್ಸ್, ಜರ್ಮನಿ, ಸ್ಪೇನ್, ರಷ್ಯಾ ಸೇರಿದಂತೆ ವಿವಿಧ ದೇಶಗಳಿಂದ ಪ್ರವಾಸಿಗರು ಹಂಪಿಗೆ ಆಗಮಿಸುತ್ತಾರೆ. ಅವರಿಗೆ ಅವರ ಭಾಷೆಯಲ್ಲಿಯೇ ಮಾಹಿತಿ ನೀಡಿದಾಗ ಪ್ರವಾಸದ ಅನುಭವ ಮತ್ತಷ್ಟು ಅರ್ಥಪೂರ್ಣವಾಗುತ್ತದೆ. ಈ ತರಬೇತಿಯನ್ನು ಉದ್ಯೋಗದ ಅವಕಾಶವಾಗಿ ಮಾತ್ರವಲ್ಲದೆ ಜ್ಞಾನಾರ್ಜನೆಯ ಅವಕಾಶವಾಗಿಯೂ ಬಳಸಿಕೊಳ್ಳಬೇಕು ಎಂದು ಹೇಳಿದರು.

ಪ್ರವಾಸಿ ಮಾರ್ಗದರ್ಶಿಗಳು ಕೇವಲ ಮಾಹಿತಿ ನೀಡುವವರಲ್ಲ, ದೇಶದ ಸಾಂಸ್ಕೃತಿಕ ರಾಯಭಾರಿಗಳಾಗಿದ್ದಾರೆ. ವಿದೇಶಿ ಭಾಷಾ ಜ್ಞಾನದಿಂದ ಸ್ಥಳೀಯ ಮಾರ್ಗದರ್ಶಿಗಳ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ ಜಿಲ್ಲೆಯ ಪ್ರವಾಸೋದ್ಯಮಕ್ಕೂ ಹೊಸ ಉತ್ತೇಜನ ದೊರೆಯಲಿದೆ ಎಂದು ಅಭಿಪ್ರಾಯಪಟ್ಟರು.

ಇಂದಿನ ಡಿಜಿಟಲ್ ಯುಗದಲ್ಲಿ ಮಾರ್ಗದರ್ಶಿಗಳು ಭಾಷಾ ಕೌಶಲ್ಯದ ಜೊತೆಗೆ ಡಿಜಿಟಲ್ ಪಾವತಿ, ಆನ್‌ಲೈನ್ ಬುಕ್ಕಿಂಗ್ ಹಾಗೂ ಪ್ರವಾಸಿ ಆ್ಯಪ್‌ಗಳ ಬಳಕೆಯ ಬಗ್ಗೆಯೂ ಅರಿವು ಹೊಂದಿರಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ವಿಭಾಗದ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕ ಡಾ. ಎಸ್. ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅಧ್ಯಕ್ಷತೆ ವಹಿಸಿದ್ದರು.

ಹೈದರಾಬಾದ್‌ನ ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ತಾರಕೇಶ್ವರ್, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ವಿರೂಪಾಕ್ಷ ಪೂಜಾರಹಳ್ಳಿ, ವಿದೇಶಿ ಭಾಷಾ ತರಬೇತಿ ಸಂಚಾಲಕ ಎಸ್.ವೈ. ಸೋಮಶೇಖರ್ ಸೇರಿದಂತೆ ವಿವಿಧ ಜಿಲ್ಲೆಗಳ ಪ್ರವಾಸಿ ಮಾರ್ಗದರ್ಶಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags

Hampi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X