ಅರಣ್ಯ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಸದ್ಭಳಕೆಗೆ ಮಾಡಿಕೊಳ್ಳಿ : ಶಾಸಕ ಹೆಚ್.ಆರ್.ಗವಿಯಪ್ಪ

ವಿಜಯನಗರ(ಹೊಸಪೇಟೆ) : ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಸಪೇಟೆಯಿಂದ ಚಿತ್ರದುರ್ಗದವರೆಗೆ ಅತಿ ಹೆಚ್ಚು ಅರಣ್ಯ ಪ್ರದೇಶ ವ್ಯಾಪಿಸಿದೆ. ಅರಣ್ಯ ಸಂರಕ್ಷಣೆ ಜತೆಗೆ ವಿಸ್ತರಣೆಗೆ ಅರಣ್ಯ ಇಲಾಖೆ ಹೆಚ್ಚಿನ ಜವಬ್ದಾರಿ ವಹಿಸಬೇಕಿದೆ ಎಂದು ಶಾಸಕ ಹೆಚ್.ಆರ್.ಗವಿಯಪ್ಪ ತಿಳಿಸಿದರು.
ನಗರದ ರಾಜೀವ್ ನಗರ ಉದ್ಯಾನವನದಲ್ಲಿ ಪ್ರಾದೇಶಿಕ ಅರಣ್ಯ ವಿಭಾಗ ಮತ್ತು ಪ್ರಾದೇಶಿಕ ವಲಯ ಸಹಯೋಗದಲ್ಲಿ ಏರ್ಪಡಿಸಿದ್ದ ವನಮಹೋತ್ಸವ ಹಾಗೂ ಪರಿಸರ ಜಾಗೃತಿ ಅರಿವು ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಗುರುವಾರ ಅವರು ಮಾತನಾಡಿದರು.
ಅರಣ್ಯ ಅಭಿವೃದ್ಧಿಗೆ ಮೀಸಲಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಅರಣ್ಯ ಇಲಾಖೆ ಮುಂದಾಗಬೇಕಿದೆ. ಅರಣ್ಯ ಪ್ರದೇಶಗಳಿಗೆ ತುಂಗಭದ್ರಾ ನದಿ ನೀರನ್ನು ವೈಜ್ಞಾನಿಕವಾಗಿ ಬಳಸಿಕೊಳ್ಳುವತ್ತ ಚಿಂತನೆ ನಡೆಸಬೇಕು ಎಂದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಹೆಚ್.ಅನುಪಮ, ನಗರಸಭೆ ಉಪಾಧ್ಯಕ್ಷ ರಮೇಶ್ ಗುಪ್ತ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬ್ಲಾಸಮ್ಸ್ ಕಿಂಡರ್ ಗಾರ್ಡನ್ ಪ್ರಾಥಮಿಕ ಮತ್ತು ಪ್ರೌಢಶಾಲೆ ಮುಖ್ಯಗುರು ವಿವೇಕ್, ರಾಜೀವ್ ನಗರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಕಟಗಿ ಗೋಪಾಲ, ಪ್ರಾದೇಶಿಕ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಿರುಬನಂತನ್, ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಶಾಲೆಯ ಶಿಕ್ಷಕರು, ಮಕ್ಕಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.







