ಉಪಚುನಾವಣೆಯಲ್ಲಿ ಗೆಲುವು: ಹರಪನಹಳ್ಳಿಯಲ್ಲಿ ಕಾಂಗ್ರೆಸ್‌ನಿಂದ ವಿಜಯೋತ್ಸವ

ಹರಪನಹಳ್ಳಿ: ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ಹಿನ್ನೆಲೆಯಲ್ಲಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ವಿಜಯೋತ್ಸವ ಆಚರಿಸಿದರು.
ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ನಗರದ ಡಾ.ಬಿ.ಆರ್.ಅಂಬೇಡ್ಕರ್ (ಐಬಿ ವೃತ್ತ) ಸರ್ಕಲ್‌ನಲ್ಲಿ ಕಾರ್ಯಕರ್ತರು ಜಮಾವಣೆಗೊಂಡು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಅಂಜಿನಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜನಪರ ಆಡಳಿತ ಮತ್ತು ಗ್ಯಾರಂಟಿ ಯೋಜನೆಗಳ ಫಲವಾಗಿ ಮತದಾರರು ಕಾಂಗ್ರೆಸ್ ಪರವಾಗಿ ಮತ ನೀಡಿದ್ದಾರೆ. ಮುಂದಿನ ಎರಡು ವರ್ಷ ಉತ್ತಮ ಆಡಳಿತ ನಡೆಸಲು ಜನರು ಬೆಂಬಲ ನೀಡಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಬೇರಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಂಚಿಕೇರಿ ಜಯಲಕ್ಷ್ಮಿ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಪೂಜಾರ ಕೃಷ್ಣನಾಯ್ಕ ಸೇರಿದಂತೆ ಟಿ. ವೆಂಕಟೇಶ, ಹುಲ್ಮನಿ ವಸಂತಪ್ಪ, ಮೈದೂರು ರಾಮಣ್ಣ, ಹುಲ್ಲಿಕಟ್ಟಿ ಚಂದ್ರಪ್ಪ, ಇಪಾರ್ನ್, ಶಮಿಉಲ್ಲಾ, ಸೊವೆಲ್, ಜಿಷಾನ್, ತಿಮ್ಮನಾಯ್ಕ, ಎಚ್.ಕೆ. ಮಂಜುನಾಥ, ಎಲ್. ಮಂಜನಾಯ್ಕ, ಗುಡಿನಾಗರಾಜ, ಸುಮಾ ಜಗದೀಶ, ಬಡಿಗಿ ರಹಮತುಲ್ಲಾ, ಎಂ.ವಿ. ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.




