ವಿಜಯನಗರ | ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪಿಯು ಕಾಲೇಜುಗಳಲ್ಲಿ ಉಚಿತ ಪ್ರವೇಶಾತಿಗೆ ಅರ್ಜಿ ಅಹ್ವಾನ

ವಿಜಯನಗರ(ಹೊಸಪೇಟೆ) : ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಜಿಲ್ಲಾ ವ್ಯಾಪ್ತಿಯ ತಿಮ್ಮಲಾಪುರ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪಿಯು ಕಾಲೇಜು, ಹಲುವಾಗಲು ಅಟಲ್ ಬಿಹಾರಿ ವಾಜಿಪೇಯಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಕಂದಗಲ್ಲು ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುಗಳಲ್ಲಿ ಎಸೆಸೆಲ್ಸಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾತಿಗಳಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಜಿಲ್ಲಾ ಸಮನ್ವಯ ಅಧಿಕಾರಿ ತಿಳಿಸಿದ್ದಾರೆ.
ವಸತಿ ಕಾಲೇಜಿನಲ್ಲಿ ಆಯ್ಕೆಯನ್ನು ಎಸೆಸೆಲ್ಸಿ ಮೆರಿಟ್ ಹಾಗೂ ಮೀಸಲಾತಿ ಅನ್ವಯ ಮಾಡಲಾಗುವುದು. ಕ್ರೈಸ್ಟ್ ವಸತಿ ಶಾಲೆಗಳಲ್ಲಿ ಅಧ್ಯಯನ ಮಾಡಿರುವ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಹಾಗೂ ಇತರ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಮೀಸಲಾತಿಯನ್ನು ಒಳಗೊಂಡಿದೆ.
ಸ್ಥಳೀಯ ಜಿಲ್ಲಾ ವಿದ್ಯಾರ್ಥಿಗಳಿಗೆ ಶೇ.75 ರಷ್ಟು ಹಾಗೂ ಇತರೆ ಜಿಲ್ಲಾ ವಿದ್ಯಾರ್ಥಿಗಳಿಗೆ ಶೇ.25 ರಷ್ಟು ಸೀಟುಗಳನ್ನು ಕಾಯ್ದಿರಿಸಲಾಗಿದೆ. ಜಿಲ್ಲೆಯ ಮೂರು ವಸತಿ ವಿಜ್ಞಾನ ಪಿಯು ಕಾಲೇಜುಗಳಲ್ಲಿ ಸುಸಜ್ಜಿತ ಪ್ರಯೋಗಾಲಯ, ಉಚಿತ ಊಟ ಮತ್ತು ವಸತಿ, ಸಮವಸ್ತ್ರ, ಪಠ್ಯಪುಸ್ತಕಗಳು, ಲೇಖನ ಸಾಮಗ್ರಿಗಳು ಸೇರಿದಂತೆ ಸಿಇಟಿ ಹಾಗೂ ನೆಟ್ ಜೆಇಇ ಮತ್ತು ಇತರೆ ವೃತ್ತಿಪರ ಕೋರ್ಸ್ ಗಳಿಗೆ ತರಬೇತಿ ನೀಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮೇ 20 ರಂದು ಕೊನೆಯ ದಿನವಾಗಿದೆ. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಪ್ರವೇಶ ಬಯಸುವ ವಸತಿ ಕಾಲೇಜುಗಳಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಆಯಾ ವಸತಿ ಕಾಲೇಜುಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.