ವಿಜಯನಗರ | ಸಹಾಯವಾಣಿ ಕೇಂದ್ರ ಆರಂಭಿಸಲು ಸ್ವಯಂಸೇವಾ ಸಂಸ್ಥೆಗಳಿಂದ ಅರ್ಜಿ ಅಹ್ವಾನ

ವಿಜಯನಗರ(ಹೊಸಪೇಟೆ) : ವಿಜಯನಗರ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಅರ್ಹ ಆಸಕ್ತಿಯುಳ್ಳ ಸಂಸ್ಥೆಯವರು ಜೂ.5 ರಿಂದ ಜೂ.30 ರೊಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಾರ್ಯಾಲಯ, ಆಗಾಫೆ ಎಜಿ ಪ್ರಾರ್ಥನಾಲಯ ಎದರು ರಸ್ತೆ, ಡಿಸಿ ಸಿವಿಲ್ ಇಂಜಿನಿಯರ್ ಕಟ್ಟಡ, ಅಮರಾವತಿ, ಹೊಸಪೇಟೆ ಕಚೇರಿಯ ಅವಧಿಯಲ್ಲಿ ಸಂಪರ್ಕಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಮಾಂಜಿನೇಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story