ವಿಜಯನಗರ | ರಸ್ತೆಗಳ ಮೇಲಿನ ಗುಂಡಿಗಳನ್ನು ಮುಚ್ಚಿಸಿ, ಅವಘಡಗಳನ್ನು ತಪ್ಪಿಸಿ : ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್
ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ

ವಿಜಯನಗರ(ಹೊಸಪೇಟೆ) : ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ರಸ್ತೆಗಳ ಮೇಲಿನ ಗುಂಡಿಗಳನ್ನು ಗುರುತಿಸಿ ಶೀಘ್ರವೇ ಮುಚ್ಚುವ ಮೂಲಕ ಅವಘಡಗಳನ್ನು ತಪ್ಪಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಪಿಡಬ್ಲೂಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಸೋಮವಾರ ಅವರು ಮಾತನಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್. ಮಾತನಾಡಿದರು.
ಸಭೆಯಲ್ಲಿ ಸಾರಿಗೆ ಇಲಾಖೆ, ಪಿಡಬ್ಲೂಡಿ, ಎನ್‌ಎಚ್‌ಎಐ ಸೇರಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
Next Story





