Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ಕಡ್ಡಾಯ ಮತ್ತು ಉಚಿತ ಶಿಕ್ಷಣ...

ವಿಜಯನಗರ | ಕಡ್ಡಾಯ ಮತ್ತು ಉಚಿತ ಶಿಕ್ಷಣ ಎಲ್ಲಾ ಮಕ್ಕಳಿಗೂ ಸಿಗಬೇಕಿದೆ : ನ್ಯಾ. ಎನ್.ಸುಬ್ರಮಣ್ಯ

ವಾರ್ತಾಭಾರತಿವಾರ್ತಾಭಾರತಿ14 Nov 2025 9:19 PM IST
share
ವಿಜಯನಗರ | ಕಡ್ಡಾಯ ಮತ್ತು ಉಚಿತ ಶಿಕ್ಷಣ ಎಲ್ಲಾ ಮಕ್ಕಳಿಗೂ ಸಿಗಬೇಕಿದೆ : ನ್ಯಾ. ಎನ್.ಸುಬ್ರಮಣ್ಯ

ವಿಜಯನಗರ : ಸಾಕ್ಷರತೆಯಲ್ಲಿ ಕೇರಳ ರಾಜ್ಯವನ್ನು ಹಿಂದಿಕ್ಕುವಷ್ಟು ಶೈಕ್ಷಣಿಕ ಪ್ರಗತಿ ಕಾರ್ಯಗಳು ವಿವಿಧ ರಾಜ್ಯಗಳು ಸಾಧಿಸಬೇಕಿದೆ. ಕಡ್ಡಾಯ ಮತ್ತು ಉಚಿತ ಶಿಕ್ಷಣ ಕಾಯ್ದೆಯಡಿ ಯಾವ ಮಗು ಕೂಡ ಶಿಕ್ಷಣದಿಂದ ವಂಚಿತರಾಗದಿರಲಿ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎನ್.ಸುಬ್ರಮಣ್ಯ ಹೇಳಿದರು.

ನಗರದ ಮಹಿಳಾ ಸಮಾಜ ಆಂಗ್ಲ ಮಾಧ್ಯಮ ಶಾಲೆ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ, ತಾಲೂಕು ಪಂಚಾಯತ್‌, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತ ಸಂವಿಧಾನದ 21ಎ ವಿಧಿಯ ಅನ್ವಯ ಶಿಕ್ಷಣ ಹಕ್ಕು ಕಾಯಿದೆಯಡಿ 6 ರಿಂದ 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಶಿಕ್ಷಣ ಹಕ್ಕಿನ ಪ್ರಕಾರ ಎಲ್ಲಾ ಮಕ್ಕಳು ಯಾವುದೇ ಶಾಲೆಯಲ್ಲಿ ಶಿಕ್ಷಣ ಪಡೆಯಬಹುದು. ಮಕ್ಕಳಿಗೆ ಜಾತಿ, ಲಿಂಗ, ಧರ್ಮ ಮತ್ತು ಇತರೆ ಕಾರಣಗಳಿಂದ ವಿದ್ಯಾಭ್ಯಾಸ ಮಾಡುವುದಕ್ಕೆ ಅವಕಾಶ ನಿರಾಕರಿಸುವಂತಿಲ್ಲ. ಕೇರಳ ರಾಜ್ಯದಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಿದೆ. ನಿರುದ್ಯೋಗ ಸಮಸ್ಯೆ ತೀರಾ ಕಡಿಮೆ ಇದೆ. ಕೇರಳ ಕೇವಲ ಸಾಕ್ಷರತೆಯಲ್ಲಿ ಅಷ್ಟೇ ಅಲ್ಲದೇ ವಿವಿಧ ಕ್ಷೇತ್ರದಲ್ಲಿಯೂ ಪ್ರಗತಿ ಸಾಧಿಸಿದೆ. ಇದಕ್ಕೆ ಕಾರಣ ಶಿಕ್ಷಣಕ್ಕೆ ಮೊದಲನೇ ಆದ್ಯತೆ ನೀಡಿರುವುದಾಗಿದೆ ಎಂದು ಹೇಳಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ್ ಮಾತನಾಡಿ, ಪ್ರತಿ ಮಕ್ಕಳಲ್ಲಿರುವ ಮುಗ್ಧತೆ, ಸಂತೋಷವನ್ನು ಸಂಭ್ರಮಿಸುವ ಆಚರಣೆಯೇ ಮಕ್ಕಳ ದಿನಾಚರಣೆಯಾಗಿದೆ. ಜವಾಹರ್ ಲಾಲ್ ನೆಹರೂ ಅವರನ್ನು ಮಕ್ಕಳು ಪ್ರೀತಿಯಿಂದ ಚಾಚಾ ಎಂದು ಕರೆಯುತ್ತಿದ್ದರು. ನೆಹರೂ ಅವರಿಗೆ ಮಕ್ಕಳೆಂದರೆ ಅಪಾರ ಪ್ರೀತಿ ಹಾಗಾಗಿ ನೆಹರೂ ಅವರು ಜನ್ಮದಿನವನ್ನು ಮಕ್ಕಳಿಗೆ ಸಮರ್ಪಿಸಿ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವೆಂಕಟೇಶ್‌ ರಾಮಚಂದ್ರಪ್ಪ ಮಾತನಾಡಿ, ಡಾ.ಸರ್ವಪಲ್ಲಿ ರಾಧಾಕೃಷ್ಣ ಅವರು ತಮ್ಮ ಜನ್ಮದಿವನ್ನು ಶಿಕ್ಷಕರಿಗೆ ಸಮರ್ಪಿಸಿದರೆ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಜನ್ಮದಿನವನ್ನು ಮಕ್ಕಳಿಗೆ ಮೀಸಲಿರಿಸಿದರು. ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆಯಲು ಪೋಷಕರು ಮತ್ತು ಶಿಕ್ಷಕರು ಸದಾವಕಾಶ ನೀಡಬೇಕು. ನಮ್ಮ ದೇಶ ಅಭಿವೃದ್ಧಿಗೆ ಮುಂದಿನ ಸತ್ಪ್ರಜೆಗಳ ಕೊಡುಗೆ ಹೆಚ್ಚಿದೆ. ಹಾಗಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಕ್ಕಳಿಗೆ ಪ್ರಮುಖವಾಗಿದೆ ಎಂದರು.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರ್ ಹೊರಪೇಟೆ, ಮಹಿಳಾ ಸಮಾಜ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಆಡಳಿತಾಧಿಕಾರಿ ಎಂ.ಗುರುರಾಘವೇಂದ್ರಚಾರ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಶ್ರೀನಿವಾಸ ಮೂರ್ತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಕುಮಾರ ಉಂಕಿ, ಮಹಿಳಾ ಸಮಾಜ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರು ರಮಾ.ಆರ್, ಚಿತ್ತವಾಡ್ಗಿ ಪಿಎಸ್‌ಐ ಸೋಮ್ಲನಾಯಕ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X