Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ಸ್ವಾವಲಂಬಿ ಬದುಕು...

ವಿಜಯನಗರ | ಸ್ವಾವಲಂಬಿ ಬದುಕು ನಿರ್ಮಾಣಕ್ಕೆ ಸಹಕಾರ ಸಂಸ್ಥೆಗಳು ಪೂರಕ : ಎಂ.ಪಿ.ಲತಾ ಮಲ್ಲಿಕಾರ್ಜುನ್

ವಾರ್ತಾಭಾರತಿವಾರ್ತಾಭಾರತಿ17 Nov 2025 8:43 PM IST
share
ವಿಜಯನಗರ | ಸ್ವಾವಲಂಬಿ ಬದುಕು ನಿರ್ಮಾಣಕ್ಕೆ ಸಹಕಾರ ಸಂಸ್ಥೆಗಳು ಪೂರಕ : ಎಂ.ಪಿ.ಲತಾ ಮಲ್ಲಿಕಾರ್ಜುನ್
72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ

ವಿಜಯನಗರ (ಹೊಸಪೇಟೆ) : ಸಂಸ್ಥೆಗಳ ತತ್ವಗಳು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಿ, ಲಕ್ಷಾಂತರ ಕುಟುಂಬಗಳಿಗೆ ಸ್ವಾವಲಂಬನೆಯ ಬದುಕನ್ನು ನೀಡುವಲ್ಲಿ ಸಹಕಾರ ಸಂಸ್ಥೆಗಳು ಪೂರಕವಾಗಿವೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕಿ ಹಾಗೂ ಹರಪನಹಳ್ಳಿ ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ್ ಹೇಳಿದರು.

ನಗರದ ಸುರಭಿ ಕಲ್ಯಾಣ ಮಂಟಪದ ಎಂ.ಪಿ.ರವೀಂದ್ರ ವೇದಿಕೆಯಲ್ಲಿ ರಾಜ್ಯ ಸಹಕಾರಿ ಮಂಡಳಿ, ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್, ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹೊಸಪೇಟೆ, ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟ, ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಅವಳಿ ಜಿಲ್ಲೆಯ ಎಲ್ಲಾ ವರ್ಗದ ಸಹಕಾರಿ ಸಂಘಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭವನ್ನು ಉದ್ಘಾಟಿಸಿ ಸೋಮವಾರ ಅವರು ಮಾತನಾಡಿದರು.

ದೇಶದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗೆ ಸಹಕಾರ ಸಂಸ್ಥೆಗಳು ಬಹುಮುಖ್ಯ ಪಾತ್ರವನ್ನು ವಹಿಸಲಿವೆ. ಈಗಾಗಲೇ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಸಬಲರಾಗಿದ್ದಾರೆ. ಜತೆಗೆ ಸಹಕಾರ ಸಂಸ್ಥೆಗಳಲ್ಲಿ ಭಾಗವಹಿಸುವ ಮೂಲಕ ಇನ್ನಷ್ಟು ಸಧೃಡಗೊಳ್ಳಬಹುದಾಗಿದೆ. ಈ ಬಾರಿಯ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಧ್ಯೇಯ ‘ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಘಗಳು’ ಎಂಬುದಾಗಿದೆ. ಸಹಕಾರ ಸಂಸ್ಥೆಗಳು ದೇಶವನ್ನು ಆರ್ಥಿಕವಾಗಿ ಸದೃಢವಾಗಿಸುವುದರ ಜತೆಗೆ ಕೃಷಿ, ಹಾಲು, ವಸತಿ, ಕೈಗಾರಿಕೆ, ಬ್ಯಾಂಕಿಂಗ್ ಮತ್ತು ಸೇವಾ ವಲಯದಲ್ಲಿ ಕ್ಷಿಪ್ರ ಸಾಧನೆಯನ್ನು ಮಾಡುತ್ತಿವೆ. ಸಂಸ್ಥೆಗಳು ಪಾರದರ್ಶಕತೆ ಮತ್ತು ನಿಷ್ಠೆಯ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಸಹಕಾರಿ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಿದ್ದರಿಂದ ಪ್ರಸ್ತುತದಲ್ಲಿ ಸಹಕಾರಿ ಸಂಸ್ಥೆಗಳು ಪ್ರಗತಿ ಸಾಧಿಸಲು ಸಾಧ್ಯವಾಗಿದೆ ಎಂದರು.

ಹೊಸಪೇಟೆ ಬಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಕೆ.ತಿಪ್ಪೇಸ್ವಾಮಿ ಮಾತನಾಡಿದರು.

ಇದೇ ವೇಳೆ ವೇದಿಕೆಯಲ್ಲಿ ಸಹಕಾರ ಸಪ್ತಾಹದ ನಿಮಿತ್ತ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ‘ಸಹಕಾರ ಪತ್ರಿಕೆ’ಯ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸಹಕಾರ ಕ್ಷೇತ್ರದಲ್ಲಿ ಸಾಧನೆಗೈದ ವಿವಿಧ ಸಾಧಕರಿಗೆ ‘ಸಹಕಾರ ರತ್ನ’ ಪ್ರಶಸ್ತಿ ಪುರಸ್ಕೃತರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಈ ವೇಳೆ ಬಿಡಿಸಿಸಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಟಿ.ಎಂ.ಚಂದ್ರಶೇಖರಯ್ಯ, ಚೊಕ್ಕ ಬಸವನಗೌಡ್ರು, ಬಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಹುಲುಗಪ್ಪ, ವಿಶ್ವನಾಥ, ಮೂಕಯ್ಯಸ್ವಾಮಿ, ಅಕ್ಕಿ ಬಸವರಾಜ, ಅಪೆಕ್ಸ್ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಾಕ ಅಧಿಕಾರಿ ದೇವರಾಜ್, ರಾಬಕೊ ಮತ್ತು ವಿಜಯನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಸತ್ಯನಾರಾಯಣ ನೆಕ್ಕಂಟಿ, ಹೊಸಪೇಟೆ ಬಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ಐ.ದಾರುಕೇಶ್, ಕೆಓಫ್‌ನ ಉಪಾಧ್ಯಕ್ಷ ಸೂಗನಗೌಡ, ಸೇರಿದಂತೆ ಅಪೆಕ್ಸ್ ಬ್ಯಾಂಕ್‌ನ ಅಧಿಕಾರಿಗಳು ಮತ್ತು ರೈತರು, ಸಾರ್ವಜನಿಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X