ವಿಜಯನಗರ | ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15 ರಂದು ಸೈಕಲ್ ರ‍್ಯಾಲಿ ಜಾಥಾ ಕಾರ್ಯಕ್ರಮ

ವಿಜಯನಗರ(ಹೊಸಪೇಟೆ) : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಸೆ.15 ರಂದು ಬೆ.7 ಗಂಟೆಯಿಂದ ಬೆ.9 ಗಂಟೆಯವರೆಗೆ ಸೈಕಲ್ ರ‍್ಯಾಲಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಹೊಸಪೇಟೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸೈಕಲ್ ರ‍್ಯಾಲಿಯು ನಗರದ ಜಿಲ್ಲಾಧಿಕಾರಿಗಳ ಕಚೇರಿಯಿಂದ ಆರಂಭವಾಗಿ ಸಾಯಿಬಾಬಾ ಸರ್ಕಲ್, ಎಪಿಎಂಸಿ ಸರ್ಕಲ್, ವಾಲ್ಮೀಕಿ ಸರ್ಕಲ್, ಮದಕರಿ ನಾಯಕ ಸರ್ಕಲ್, ಏಕ್ ಮಿನಾರ್, ಮಸೀದಿ, ಗಾಂಧಿ ಚೌಕ್, ಪುಣ್ಯಮೂರ್ತಿ ಸರ್ಕಲ್, ಪುನೀತ್ ರಾಜಕುಮಾರ ಸರ್ಕಲ್, ಡಾ.ಬಿ.ಆರ್ ಅಂಬೇಡ್ಕರ್ ಸರ್ಕಲ್ ಮೂಲಕ ಒಳಂಗಾಣ ಕ್ರೀಡಾಂಗಣದವರೆಗೆ ಸೈಕಲ್ ರ‍್ಯಾಲಿ ಜಾಥಾವನ್ನು ನಡೆಸಲಾಗುತ್ತದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಲೋಕಸಭಾ ಸದಸ್ಯರು, ಶಾಸಕರು, ಜಿಲ್ಲಾಡಳಿತ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
Next Story





