ವಿಜಯನಗರ | ಜಿಲ್ಲಾ ಕಾಂಗ್ರೆಸ್‌ನ ಪ್ರಚಾರ ಸಮಿತಿಯ ಕಾರ್ಯಕರ್ತರ ಸಭೆ

ಹೊಸಪೇಟೆ : ನಗರದ ವಿ.ಕೆ.ರಾಯಲ್ ಗಾರ್ಡನ್ ಫಂಕ್ಷನ್ ಹಾಲ್ ಸಭಾಂಗಣದಲ್ಲಿ ವಿಜಯನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಯಿತು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಅವರು ಮಾತನಾಡಿ, ಪ್ರಚಾರ ಸಮಿತಿ ಅನ್ನೋದು ಕೇವಲ ಚುನಾವಣೆ ಗೋಸ್ಕರ ಸೀಮಿತ ಅಲ್ಲ, ವರ್ಷದ 360 ದಿನಗಳ ಕಾಲ ಪಕ್ಷದ ಪ್ರಚಾರದಲ್ಲಿ ಸಂಘಟನೆ ಕಾರ್ಯನಿರತವಾಗಿರಬೇಕು. ರಾಜ್ಯಮಟ್ಟದಲ್ಲಿ ಲಕ್ಷಕ್ಕೂ ಹೆಚ್ಚು ಸಂಘಟಿತರನ್ನು ರಚಿಸುವ ಉದ್ದೇಶವನ್ನು ಇಟ್ಟುಕೊಂಡು ರಾಜ್ಯ ಪ್ರವಾಸವನ್ನು ಮಾಡುತ್ತಿದ್ದೇವೆ ಇಲ್ಲಿಯವರೆಗೆ 23 ಜಿಲ್ಲೆಗಳಲ್ಲಿ ಸಂಘಟನೆಯನ್ನು ಮಾಡಲಾಗಿದೆ ಎಂದರು.
ನಮ್ಮ ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸರ್ಕಾರದ ಸಾಧನೆಗಳನ್ನು ಜನರ ಮುಂದಿಡುವ ಕೆಲಸ ಹಾಗೂ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳನ್ನ ಗೆಲುವು ಸಾಧಿಸುವುದರಲ್ಲಿ ಈ ಸಂಘಟನೆಯ ಮುಖ್ಯ ಉದ್ದೇಶವಾಗಿರುತ್ತದೆ ಎಂದು ತಿಳಿಸಿದರು.
ವಿಜಯನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಹಾಗೂ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್.ಮುಹಮ್ಮದ್ ಇಮಾಮ್ ನಿಯಾಜಿ ಅವರು ಮಾತನಾಡಿದರು.
ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ಮಂಜುನಾಥ, ಕೆಪಿಸಿಸಿ ಪ್ರಚಾರ ಸಮಿತಿ ಸಂಯೋಜಕರಾದ ಯಶೋಧರ ಮೂರ್ತಿ, ಹೊಸಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಭರತ್ ಕುಮಾರ್, ಹೊಸಪೇಟೆ ಗ್ರಾಮಾಂತರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಜಂಬಯ್ಯ, ಹೊಸಪೇಟೆ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ವೆಂಕಟರಮಣ, ಕೆಪಿಸಿಸಿ ಅಲ್ಪಸಂಖ್ಯಾತರ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಸೈಯದ್, ಹೊಸಪೇಟೆ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಯೋಗಲಕ್ಷೀ, ಹಡಗಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೋಟ್ರೇಶ, ಹೊಸಪೇಟೆ ನಗರಸಭಾ ಸದ್ಯಸರಾದ ಅಸ್ಲಾಂ ಮಾಳಗಿ, ರಾಘವೇಂದ್ರ, ಖಲಂದರ್, ಮುನ್ನಿಖಾಂಸೀ, ಹೊಸಪೇಟೆ ಬ್ಲಾಕ್ ಕಾಂಗ್ರೆಸ್ ಮುಂಚೂಣಿ, ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಹೊಸಪೇಟೆ ನಗರದ ವಿವಿಧ ಗ್ರಾಮ ಪಂಚಾಯತ್ ಸದಸ್ಯರು, ಕಾಂಗ್ರೆಸ್ ಯಂಗ್ ಬ್ರಿಗೇಡ್ ಸೇವಾದಳ ಜಿಲ್ಲಾಧ್ಯಕ್ಷರಾದ ವೈ.ರಾಘವೇಂದ್ರ, ಎಮ್.ಡಿ.ಮುಸ್ತಫ ಹುಸೇನ್, ಎಮ್.ಡಿ.ಫಯಾಝ್, ರಮೇಶ್ ಭಾಗವಹಿಸಿದ್ದರು.







