ವಿಜಯನಗರ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕುರಿತು ಜಿಲ್ಲಾ ಮಟ್ಟದ ಸಹಾಯವಾಣಿ ಆರಂಭ

ವಿಜಯನಗರ (ಹೊಸಪೇಟೆ) : ಹಿಂದುಳಿದ ವರ್ಗಗಳ ಆಯೋಗ ಅಡಿಯಲ್ಲಿ ಸೆ.22 ರಿಂದ ಅ.7 ರವರೆಗೆ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ರ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ಗಣತಿದಾರರು ಕೋರುವ ಮಾಹಿತಿಯನ್ನು ಒದಗಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದ್ದು, ಬೆ.10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕಾರ್ಯನಿರ್ವಹಿಸುತ್ತದೆ.
ಟೋಲ್ ಫ್ರೀ ಸಂಖ್ಯೆ 1077 ಮತ್ತು 9141857081 ಸಂಖ್ಯೆಗಳಿಗೆ ಕರೆ ಮಾಡಬಹುದು. ನೇರವಾಗಿ ಜಿಲ್ಲಾಧಿಕಾರಿಗಳ ಕಚೇರಿ, ಹೊಸಪೇಟೆ ಇಲ್ಲಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ತಿಳಿಸಿದ್ದಾರೆ.
Next Story





