Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ| ಜಿಲ್ಲಾ ಪೊಲೀಸ್ ವಾರ್ಷಿಕ...

ವಿಜಯನಗರ| ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ: ದೈಹಿಕ ಸದೃಢತೆ, ಒತ್ತಡ ನಿರ್ವಹಣೆಗೆ ಕ್ರೀಡೆಗಳು ಸಹಕಾರಿ: ಕವಿತಾ ಎಸ್.ಮನ್ನಿಕೇರಿ

ವಾರ್ತಾಭಾರತಿವಾರ್ತಾಭಾರತಿ28 Nov 2025 9:32 PM IST
share
ವಿಜಯನಗರ| ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ: ದೈಹಿಕ ಸದೃಢತೆ, ಒತ್ತಡ ನಿರ್ವಹಣೆಗೆ ಕ್ರೀಡೆಗಳು ಸಹಕಾರಿ: ಕವಿತಾ ಎಸ್.ಮನ್ನಿಕೇರಿ

ವಿಜಯನಗರ: ಪೊಲೀಸ್ ವೃತ್ತಿಯಲ್ಲಿ ಮಾನಸಿಕ, ಬೌದ್ಧಿಕ ಆರೋಗ್ಯದ ಜೊತೆಗೆ ದೈಹಿಕ ಸದೃಢತೆ ಅತ್ಯಗತ್ಯ. ಒತ್ತಡ ನಿರ್ವಹಣೆಗೆ ಕ್ರೀಡೆಗಳು ತುಂಬಾ ಸಹಕಾರಿಯಾಗಲಿವೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.

ನಗರದ ಡಿಎಆರ್ ಪರೇಡ್ ಮೈದಾನದ ಟಿಎಸ್‌ಪಿ ಆವರಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ತುರ್ತುಸೇವೆ ವಿಭಾಗದಲ್ಲಿ ಪೋಲಿಸ್ ಇಲಾಖೆ ಮಹತ್ತರ ಕರ್ತವ್ಯಗಳನ್ನು ನಿರ್ವಹಿಸುತ್ತದೆ. ಪೊಲೀಸರು ಕರ್ತವ್ಯ ವಿಚಾರದಲ್ಲಿ ಮಳೆ, ಚಳಿ, ಬಿಸಿಲು ಎನ್ನದೇ ಸದಾ ಸನ್ನದ್ಧರಾಗಿ ಕರ್ತವ್ಯ ನಿರತರಾಗಿರುತ್ತಾರೆ. ಪೊಲೀಸರು ಸಮಾಜದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇಲಾಖೆಗಳಲ್ಲಿನ ನೌಕರರ ಆರೋಗ್ಯದ ಹಿತದೃಷ್ಟಿಯಿಂದ ವಾರ್ಷಿಕ ಕ್ರೀಡಾಕೂಟಗಳನ್ನು ಆಯೋಜಿಸಿ ನೌಕರರಲ್ಲಿ ಉತ್ಸಾಹ ಮೂಡಿಸುತ್ತಿರುವುದು ಶ್ಲಾಘನೀಯ. ಕ್ರೀಡೆಗಳಿಂದ ಸಮತೋಲನ ಆರೋಗ್ಯ ವೃದ್ಧಿಯಾಗಲಿದೆ. ನಿತ್ಯ ಚೈತನ್ಯಭರಿತರಾಗಲು ಇಂತಹ ಕ್ರೀಡೆಗಳು ಸಹಕಾರಿಯಾಗಲಿವೆ. ಕ್ರೀಡಾಳುಗಳಲ್ಲಿ ಸೋಲು, ಗೆಲುವುಗಿಂತ ಭಾಗವಹಿಸುವಿಕೆ ಮುಖ್ಯವಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮುಹಮ್ಮದ್‌ ಅಕ್ರಮ್ ಅಲಿ ಷಾ ಮಾತನಾಡಿ, ಕ್ರೀಡೆಯಲ್ಲಿ ಶಿಸ್ತು, ಉತ್ಸಾಹ ಮತ್ತು ಪ್ರಾಮಾಣಿಕತೆ ಮುಖ್ಯವಾಗಿದೆ. ಪೊಲೀಸ್ ಇಲಾಖೆಯ ಪ್ರತಿಯೊಬ್ಬರು ಈ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು. ದಿನ ನಿತ್ಯ ಎದುರಾಗುವ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಕ್ರೀಡಾಕೂಟದಲ್ಲಿ ಸ್ಪರ್ಧಿಸಿ ಮಾನಸಿಕ ನಿರಾಳತೆಯನ್ನು ಪಡೆಯಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಸ್.ಜಾಹ್ನವಿ ಮಾತನಾಡಿ, ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವು ಮೂರು ದಿನಗಳ ಕಾಲ ನಡೆಯಲಿದೆ. ಇದರಲ್ಲಿ ಭಾಗವಹಿಸಿದ ಮೂರು ಉಪವಿಭಾಗಗಳ ಐದು ತಂಡಗಳು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿ ಕ್ರೀಡಾಮನೋಭಾವದಿಂದ ಆಟಗಳಲ್ಲಿ ಭಾಗವಹಿಸಬೇಕು ಎಂದರು.

ಇದಕ್ಕೂ ಮುನ್ನ ಆಕರ್ಷಕ ಪಥಸಂಚಲನ ನಡೆಸಲಾಯಿತು. ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಮಂಜುನಾಥ್‌ ಸೇರಿದಂತೆ ನಿವೃತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

Tags

Vijayanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X