ವಿಜಯನಗರ | ಎ.30ರೊಳಗೆ ಪಡಿತರ ಚೀಟಿ ಸದಸ್ಯರಿಂದ ಇ-ಕೆವೈಸಿ ಕಡ್ಡಾಯ : ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್

ಸಾಂದರ್ಭಿಕ ಚಿತ್ರ
ವಿಜಯನಗರ(ಹೊಸಪೇಟೆ) : ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ನೀಡಲಾಗಿರುವ ಪಡಿತರದಾರರಿಗೆ ಇ-ಕೆವೈಸಿ ನೊಂದಾಣಿ ಕಡ್ಡಾಯವಾಗಿದ್ದು, ಎ.30 ರೊಳಗೆ ನಿಗಧಿತ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಸಲ್ಲಿಸಲು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.
ಎಸ್ಸಿ, ಎಸ್ಟಿ ಹಾಗೂ ಇತರೆ ಮೀಸಲಾತಿಯವರಿದ್ದಲ್ಲಿ ಜಾತಿ ಪ್ರಮಾಣ ಪತ್ರ, ಅನಿಲ ಸಂಪರ್ಕ ಹೊಂದಿದ್ದಲ್ಲಿ ಮಾಹಿತಿ ನೀಡದ ಪಡಿತರ ಚೀಟಿದಾರರು ಗ್ರಾಹಕ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಿಗಧಿತ ನ್ಯಾಯಬೆಲೆ ಅಂಗಡಿಯಲ್ಲಿ ಉಚಿತವಾಗಿ ಸಲ್ಲಿಸಿ ತಂತ್ರಾಂಶದಲ್ಲಿ ದಾಖಲಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





