ವಿಜಯನಗರ | ಜೂನ್.22ರವರೆಗೆ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಗೆ ಅವಧಿ ವಿಸ್ತರಣೆ

ಸಾಂದರ್ಭಿಕ ಚಿತ್ರ
ವಿಜಯನಗರ(ಹೊಸಪೇಟೆ) : 2025-26ನೇ ಸಾಲಿನ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರಿಗೆ ಜೂ.9 ರಿಂದ ಜೂ.22 ರವರೆಗೆ ಕಾಲವಧಿಯನ್ನು ವಿಸ್ತರಿಸಿ ಆನ್ಲೈನ್ ಮೂಲಕವೂ ನೋಂದಾಯಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.
ನಾಗರೀಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್, ಬೆಂಗಳೂರು ಒನ್, ಮತ್ತು ಗ್ರಾಮ ಒನ್ ಕೇಂದ್ರಗಳು, ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸಮೀಕ್ಷೆಗೆ ಅವಕಾಶವನ್ನು ಕಲ್ಪಿಸಲಾಗಿರುತ್ತದೆ. ಇದಲ್ಲದೇ ಅನ್ಲೈನ್ ಮೂಲಕ https://schedulecastesurvey.karnataka.gov.in/selfdeclaration ಲಿಂಕ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳುವ ವಿಧಾನವನ್ನು ಜೂ.22 ರವರೆಗೆ ವಿಸ್ತರಿಸಲಾಗಿದೆ.
ಸಾರ್ವಜನಿಕರ ಅನುಕೂಲಕ್ಕಾಗಿ ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ವಿಜಯನಗರ ಹಾಗೂ ವಿಧಾನಸಭಾ ಕ್ಷೇತ್ರವಾರು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಕಂಟ್ರೋಲ್ ರೂಂ ಗಳನ್ನು ಸ್ಥಾಪಿಸಲಾಗಿದೆ. ವಿಜಯನಗರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಅಧಿಕಾರಿಗಳು ಕೆ.ಬಿ.ರಾಮಚಂದ್ರಪ್ಪ ಮೊ.9141827465, ವಿಜಯನಗರ ರಮೇಶ್ ಮೊ.8095002829, ಹೊಸಪೇಟೆ ನಜೀಮಾ ಭಾನು ಮೊ. 9108777499, ಹಗರಿಬೊಮ್ಮನಹಳ್ಳಿ ಆನಂದ.ವೈ.ಡೊಳ್ಳಿನ ಮೊ.9901980762, ಕೂಡ್ಲಿಗಿ ಶಾಹೇಖಾ ಅಹ್ಮದಿ ಮೊ.8105909630, ಹಡಗಲಿ ಜ್ಯೋತಿ ಮೊ.9482608061, ಹರಪನಹಳ್ಳಿ ಎಸ್.ಆರ್.ಗಂಗಪ್ಪ ಮೊ.9739094433 ಸಮೀಕ್ಷೆಯ ಬಗ್ಗೆ ಮಾಹಿತಿ ಪಡೆಯಲು ಕಂಟ್ರೋಲ್ ರೂಂ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.