Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ಹಕ್ಕು ಪತ್ರ ವಿತರಿಸುವಂತೆ...

ವಿಜಯನಗರ | ಹಕ್ಕು ಪತ್ರ ವಿತರಿಸುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 Nov 2025 8:23 PM IST
share
ವಿಜಯನಗರ | ಹಕ್ಕು ಪತ್ರ ವಿತರಿಸುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ವಿಜಯನಗರ : ತುಂಗಭದ್ರಾ ಜಲಾಶಯ ನಿರ್ಮಾಣಕ್ಕಾಗಿ ಮನೆ, ಜಮೀನು ಕಳೆದುಕೊಂಡು ಪುನರ್ವಸತಿ ಪಡೆದ ರೈತರಿಗೆ ಜಮೀನು ಹಕ್ಕುಪತ್ರ ಒದಗಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಮರಿಯಮ್ಮನಹಳ್ಳಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿವರೆಗೆ ಸೋಮವಾರ ಪಾದಯಾತ್ರೆ ನಡೆಸಿದರು.

ಮರಿಯಮ್ಮನಹಳ್ಳಿ ಆಂಜನೇಯ ದೇವಸ್ಥಾನದಿಂದ ಹೊರಟ ರೈತರು 18 ಕಿಮೀ ಪಾದಯಾತ್ರೆ ನಡೆಸಿದರು. ನಂದಿಬಂಡಿ, ಡಣನಾಯಕನಕೆರೆ ಗ್ರಾಮಗಳ ಬಳಿ ಅರಣ್ಯದಂಚಿನ ಪ್ರದೇಶದಲ್ಲಿ ಕಳೆದ 73 ವರ್ಷಗಳಿಂದ ಸುಮಾರು 800 ಎಕರೆ ಪ್ರದೇಶದಲ್ಲಿ ರೈತರು ಸಾಗುವಳಿ ಮಾಡುತ್ತಿದ್ದಾರೆ. ಅದರೆ, ರೈತರಿಗೆ ಸಾಗುವಳಿಗಾಗಿ ಹಕ್ಕುಪತ್ರ ಒದಗಿಸಲಾಗಿಲ್ಲ.‌ ತುಂಗಭದ್ರಾ ಜಲಾಶಯ ನಿರ್ಮಾಣದ ಹಿನ್ನೆಲೆ ಮುಳುಗಡೆ ಪ್ರದೇಶದಿಂದ ಪುನರ್ವಸತಿ ಕಲ್ಪಿಸುವ ವೇಳೆ ಸರಕಾರ ಅರಣ್ಯದಂಚಿನ ಜಮೀನು ತೋರಿಸಿತ್ತು. ಈ ಜಮೀನುಗಳಲ್ಲೇ ರೈತರು ಸಾಗುವಳಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದರು. ಆದರೆ, ಇದುವರೆಗೆ ಸಾಗುವಳಿ ಪತ್ರ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರಿಗೆ ಜಮೀನು ಸಾಗುವಳಿ ಪತ್ರ ಈ ಕೂಡಲೇ ಒದಗಿಸಬೇಕು. ರೈತರ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಾಲ್ಕು ಬಾರಿ ಮನವಿಪತ್ರ ಸಲ್ಲಿಸಲಾಗಿದೆ. ಆದರೆ, ಈಗ ಹೊಸಪೇಟೆ ತಹಸಿಲ್ ಕಚೇರಿ ಮೂಲಕ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯತ್ ನಿಂದ ಬರೀ 3 ಕಿಮೀ ಅಂತರದಲ್ಲಿರುವ ಹಿನ್ನೆಲೆ ಸಾಗುವಳಿ ಹಕ್ಕುಪತ್ರ ಕೊಡಲು ಬರುವುದಿಲ್ಲ ಎಂದು ತಿಳಿಸಲಾಗಿದೆ. ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯತ್ ಆಗಿ ಒಂಭತ್ತು ವರ್ಷಗಳಾಗಿವೆ. ನಾವು ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವುದು 73 ವರ್ಷಗಳಾಗಿವೆ. ಹೀಗಿದ್ದರೂ ಜಮೀನಿಗೆ ಹಕ್ಕುಪತ್ರ ನೀಡಲು ಹಿಂದೇಟು ಹಾಕಲಾಗುತ್ತಿದೆ. ನಾವು ಇದನ್ನು ಬಲವಾಗಿ ವಿರೋಧಿಸುತ್ತೇವೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿಪತ್ರ ರವಾನಿಸಿದರು.

ಈ ವೇಳೆ ರೈತ ಮುಖಂಡರಾದ ಗೋಣಿ ಬಸಪ್ಪ, ಎಂಎಲ್ ಕೆ ನಾಯ್ಡು, ಮೆಹಬೂಬ್ ಸಾಬ್, ಗಂಟೆ ಸೋಮಶೇಖರ,‌ ಮಂಜುಳಾ ಅಕ್ಕಿ, ಇಬ್ರಾಹಿಂಸಾಬ್, ದುರ್ಗಪ್ಪ, ರವಿಕುಮಾರ, ಕೆಂಚಪ್ಪ, ಹನುಮಂತಪ್ಪ ಮತ್ತಿತರರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X