ವಿಜಯನಗರ | ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸದ್ಭಾವನಾ ದಿನಾಚರಣೆ : ಪ್ರತಿಜ್ಞಾವಿಧಿ ಸ್ವೀಕಾರ

ವಿಜಯನಗರ(ಹೊಸಪೇಟೆ) : ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಅವರು ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ವರ್ಗದವರಿಗೆ ಸದ್ಬಾವನಾ ದಿನಾಚರಣೆಯ ನಿಮಿತ್ತ ಪ್ರತಿಜ್ಞಾ ವಿಧಿಯನ್ನು ಬುಧವಾರ ಬೋಧಿಸಿದರು.
ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು. ಅಲ್ಲದೇ ವೈಯಕ್ತಿಕವಾಗಲಿ ಅಥವಾ ಸಾಮೂಹಿಕವಾಗಲಿ ನಮ್ಮಲ್ಲಿರುವ ಎಲ್ಲಾ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೇ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇನೆಂದು ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
Next Story





