ವಿಜಯನಗರ | ಮನೆ ಗೋಡೆ ಕುಸಿತ : ಸ್ಥಳಕ್ಕೆ ಅಧಿಕಾರಿಗಳ ಭೇಟಿ

ವಿಜಯನಗರ (ಹೊಸಪೇಟೆ) : ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದ ಸುದ್ದಿ ವಾರ್ತಾಭಾರತಿಯಲ್ಲಿ ಪ್ರಸಾರವಾದ ಹಿನ್ನೆಲೆಯಲ್ಲಿ ತಾಲೂಕು ದಂಡಾಧಿಕಾರಿಗಳು ಎಚ್ಚೆತ್ತಿಕೊಂಡು ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ವೀಕ್ಷಣೆ ಮಾಡಿದರು.
ನಂತರ ಮನೆಯ ಮಾಲಕರಿಂದ ಮಾಹಿತಿ ಪಡೆದು, ಸರ್ಕಾರದಿಂದ ಬರುವ ಪರಿಹಾರವನ್ನು ನೀಡುವ ಭರವಸೆಯನ್ನು ನೀಡಿದರು.
ನಿನ್ನೆ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಹೊಸಪೇಟೆ ನಗರದ 19ನೇ ವಾರ್ಡಿನ ಸುಲೇಮಾನ್ ಎಂಬವರ ಮನೆಯ ಗೋಡೆ ಕುಸಿದಿದ್ದು, ಮನೆಯಲ್ಲಿ ಯಾರೂ ಇಲ್ಲದಿದ್ದ ಕಾರಣ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
Next Story







