Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಗಣಿ ಬಾಧಿತರಿಗೆ 1,146...

Vijayanagara | ಗಣಿ ಬಾಧಿತರಿಗೆ 1,146 ಕೋಟಿ ರೂ. ವೆಚ್ಚದ ವಸತಿ ಯೋಜನೆ: ಗುಣಮಟ್ಟ, ಸಮಯ ಪಾಲನೆಗೆ ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 May 2026 10:07 PM IST
share
Vijayanagara | ಗಣಿ ಬಾಧಿತರಿಗೆ 1,146 ಕೋಟಿ ರೂ. ವೆಚ್ಚದ ವಸತಿ ಯೋಜನೆ: ಗುಣಮಟ್ಟ, ಸಮಯ ಪಾಲನೆಗೆ ಡಿಸಿ ಸೂಚನೆ

ವಿಜಯನಗರ (ಹೊಸಪೇಟೆ) : ಗಣಿ ಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿ ಮತ್ತು ಅಲ್ಲಿನ ನಿವಾಸಿಗಳ ಪುನಶ್ಚೇತನಕ್ಕಾಗಿ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ (ಕೆಎಂಇಆರ್‌ಸಿ) ವತಿಯಿಂದ ಸುಮಾರು 1,146 ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಲಭ್ಯಗಳನ್ನೊಳಗೊಂಡ ಸುಸಜ್ಜಿತ ವಸತಿ ಸೌಲಭ್ಯ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ವಿ.ಸಿ ಹಾಲ್‌ನಲ್ಲಿ ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಯೋಜನೆಯ ಅನುಷ್ಠಾನದಲ್ಲಿ ಯಾವುದೇ ವಿಳಂಬ ಅಥವಾ ಸಮನ್ವಯ ಕೊರತೆಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ವಸತಿ ಸಂಕೀರ್ಣಗಳ ನಿರ್ಮಾಣದ ವೇಳೆ ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಕಡ್ಡಾಯವಾಗಿದ್ದು, ರಸ್ತೆ ನಿರ್ಮಾಣದ ನಂತರ ಪೈಪ್‌ಲೈನ್‌ಗಾಗಿ ಮರು ಅಗೆತ ನಡೆಯುವಂತಹ ತಪ್ಪುಗಳು ಮರುಕಳಿಸಬಾರದು ಎಂದು ಸೂಚಿಸಿದರು.

1,146 ಕೋಟಿ ರೂ. ವೆಚ್ಚದ ಬೃಹತ್ ಯೋಜನೆಯಾದ್ದರಿಂದ ಪ್ರತಿ ಹಂತದಲ್ಲೂ ಕಾಮಗಾರಿಯ ಗುಣಮಟ್ಟ ಪರಿಶೀಲನೆ ಅಗತ್ಯವಾಗಿದೆ. ಕೇವಲ ಮನೆ ನಿರ್ಮಾಣವಲ್ಲ, ಕುಡಿಯುವ ನೀರು, ಒಳಚರಂಡಿ ಹಾಗೂ ವಿದ್ಯುತ್ ವ್ಯವಸ್ಥೆ ಪೂರ್ಣಗೊಂಡ ಬಳಿಕವೇ ಮನೆಗಳನ್ನು ಹಸ್ತಾಂತರಿಸಬೇಕು ಎಂದು ಹೇಳಿದರು.

ಒಟ್ಟು 1,183 ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಲೋಪವಾಗಬಾರದು. ಅರ್ಹ ಗಣಿ ಬಾಧಿತ ಕುಟುಂಬಗಳಿಗೆ ಮಾತ್ರ ಸೌಲಭ್ಯ ತಲುಪುವಂತೆ ಹಾಗೂ ಯಾರೂ ಯೋಜನೆಯಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಮನೋಹರ್ ಮಾಹಿತಿ ನೀಡಿ, ಯೋಜನೆಗೆ ಸಂಬಂಧಿಸಿದ ಡಿಪಿಆರ್ ಈಗಾಗಲೇ ಸಿದ್ಧವಾಗಿ ಅನುಮೋದನೆ ದೊರೆತಿದೆ. ಜಂಬುನಾಥಹಳ್ಳಿ, ಕೆಎಂಎನ್‌ಐ ಕ್ಯಾಂಪ್, ಬೊಂಬೆ ಕ್ಯಾಂಪ್, ಹಂಪಿನಕಟ್ಟೆ, ಅಂಬೇಡ್ಕರ್ ನಗರ, ಕಾರಿಗನೂರು, ಕೊಟ್ರೇಶ್ವರ ನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಗಣಿ ಬಾಧಿತ ಕುಟುಂಬಗಳಿಗೆ ನಿವೇಶನ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಶಿಕಾರಿ ಕ್ಯಾಂಪ್‌ನ ಕೆಲವು ಫಲಾನುಭವಿಗಳಿಗೆ ನಿವೇಶನ ಕೊರತೆ ಇದ್ದು, ಉಳಿದವರಿಗೆ ಕೂಡಲೇ ನಿವೇಶನ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಯೋಜನೆ ನಿಗದಿತ ಅವಧಿಯಲ್ಲಿ, ಗುಣಮಟ್ಟದೊಂದಿಗೆ ಪೂರ್ಣಗೊಳ್ಳಲು ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವೆಂದು ಹೇಳಿದರು.

ಈ ಯೋಜನೆಯ ಮೂಲಕ ಗಣಿ ಬಾಧಿತ ಕುಟುಂಬಗಳಿಗೆ ನೆಮ್ಮದಿಯ ಜೀವನ ಒದಗಿಸುವುದು ಆಡಳಿತದ ಮುಖ್ಯ ಉದ್ದೇಶವಾಗಿದ್ದು, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ವಿವೇಕ್, ತಹಶೀಲ್ದಾರ್ ಶೃತಿ ಎಂ, ನಗರಸಭೆ ಪೌರಾಯುಕ್ತ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Vijayanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X