ವಿಜಯನಗರ | ಮೇ 5 ರಂದು ಫೋನ್ ಇನ್ ಕಾರ್ಯಕ್ರಮ

ವಿಜಯನಗರ(ಹೊಸಪೇಟೆ) : ಶಕ್ತಿ ಯೋಜನೆ ಜಾರಿಯಾದಗಿನಿಂದ ನಿಗಮದ ಸಾರಿಗೆಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿ, ನಿಗಮದ ಸಾರಿಗೆಗಳಿಗೆ ಹೆಚ್ಚಿನ ಬೇಡಿಕೆ ಉಂಟಾಗಿದೆ. ಗ್ರಾಮಗಳಿಗೆ ನಿಗದಿತ ಸಮಯಕ್ಕೆ ಬಸ್‌ಗಳು ಬಾರದೇ ಇರುವುದು ಸಮರ್ಪಕವಾಗಿ ಸಾರಿಗೆಗಳು ಕಾರ್ಯಾಚಾರಣೆಯಾಗದಿರುವುದು, ನಿಗದಿತ ಸ್ಥಳಗಳಲ್ಲಿ ನಿಲುಗಡೆ ಮಾಡದಿರುವುದು, ಬಸ್ಸುಗಳಲ್ಲಿ ಸ್ಥಳಾವಕಾಶ ಇಲ್ಲದಿರುವುದು, ಶಾಲಾ ಕಾಲೇಜಿನ ಅವಧಿಯಲ್ಲಿ ಬೆಳಿಗ್ಗೆ ಹಾಗೂ ಸಾಯಂಕಾಲ ಹೆಚ್ಚಿನ ಸಾರಿಗೆ ಸೌಲಭ್ಯದ ಕೊರತೆ ಇರುವುದನ್ನು ಗಮನಿಸಿ ಸಾರಿಗೆ ಸೌಲಭ್ಯಕ್ಕೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ(ಕೆಕೆಎಸ್ಸಾರ್ಟಿಸಿ) ಹೊಸಪೇಟೆ ವಿಭಾಗದಿಂದ ಸಮರ್ಪಕ ಬಸ್ ಸಂಚಾರ ಕುರಿತು ಪೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು, ಪ್ರಯಾಣಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಾರಿಗೆ ಬಸ್‌ಗಳ ಸಂಚಾರದಲ್ಲಿ ಉಂಟಾಗುತ್ತಿರುವ ಕುಂದು ಕೊರತೆ ಹಾಗೂ ಸಮಸ್ಯೆಗಳ ಕುರಿತು ಮೇ 5 ರಂದು ಮಧ್ಯಾಹ್ನ 3:30 ರಿಂದ 4:30 ವರೆಗೆ ದೂರವಾಣಿ ಸಂಖ್ಯೆಗಳಾದ 7760992314, 7760992317 ಗೆ ಕರೆ ಮಾಡಿ ಸಮಸ್ಯೆಗಳನ್ನು ತಿಳಿಸಬಹುದು. ಈ ಸಮಸ್ಯೆಗಳಿಗೆ ಸ್ಪಂದಿಸಿ ಸೂಕ್ತ ಪರಿಹಾರ ದೊರಕಿಸಿ ಕೊಡುವುದಾಗಿ ಹೊಸಪೇಟೆ ವಿಭಾಗದ ನಿಯಂತ್ರಣಾಧಿಕಾರಿ ತಿಮ್ಮಾರೆಡ್ಡಿ ಹೀರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





