ವಿಜಯನಗರ | ಗ್ಯಾರಂಟಿ ಫಲಾನುಭವಿಗಳ ಸಮಸ್ಯೆಗಳನ್ನು ಅನುಷ್ಟಾನ ಸಮಿತಿ ಸದಸ್ಯರು ಆಲಿಸಲಿ : ಎಸ್.ಆರ್.ಮೆಹರೋಝ್ ಖಾನ್
ಜಿಲ್ಲಾ ಮಟ್ಟದ ಸಮಾಲೋಚನಾ ಸಭೆ

ವಿಜಯನಗರ(ಹೊಸಪೇಟೆ) : ಸರಕಾರದ ಮಹತ್ವಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳ ಸಮಸ್ಯೆಗಳನ್ನು ಆಲಿಸಿ, ಸಮರ್ಪಕವಾಗಿ ತಲುಪಿಸುವ ಕಾರ್ಯವನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಮಾಡಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಮೆಹರೋಝ್ ಖಾನ್ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಗ್ಯಾರಂಟಿ ಅನುಷ್ಟಾನ ಸಮಿತಿಯ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಸೋಮವಾರ ಮಾತನಾಡಿದರು.
ಈಗಾಗಲೇ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವಲ್ಲಿ ಸರ್ಕಾರ ಮತ್ತು ಅಧಿಕಾರಿಗಳ ವರ್ಗ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿರುವುದರಿಂದಲೇ ಫಲಾನುಭವಿಗಳಿಗೆ ಯೋಜನೆಗಳ ಲಭ್ಯತೆ ಸಕಾರವಾಗಿದೆ. ಆದರೆ ಗ್ರಾಮೀಣ ಭಾಗದಲ್ಲಿ ಕೆಲವು ಸಣ್ಣಪುಟ್ಟ ಸಮಸ್ಯೆಗಳಿಂದ ಅರ್ಹ ಫಲಾನುಭವಿಗಳು ಯೋಜನೆಗಳನ್ನು ಪಡೆಯುವಲ್ಲಿ ವಂಚಿತರಾಗಿದ್ದಾರೆ. ಅಂತಹ ಸಮಸ್ಯೆಗಳಿಗೆ ಶೀಘ್ರ ಪರಿಹಾರ ನೀಡಲು ಸಮಿತಿ ಸದಸ್ಯರು ಕಾರ್ಯೋನ್ಮುಖರಾಗಬೇಕಿದೆ ಎಂದರು.
ಸಮಿತಿ ಸದಸ್ಯ ಪರಶುರಾಮ, ಸದಸ್ಯರಾದ ಗೀರೀಶ್ ಗೌರಜ್ಜನವರ್, ಜಿಪಂ ಸಿಇಓ ನೋಂಗ್ಜಾಯ್ ಮುಹಮ್ಮದ್ ಅಲಿ ಅಕ್ರಮ್ ಶಾ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಪ್ರಾಧಿಕಾರದ ಉಪಾಧ್ಯಕ್ಷರಾದ ಕೆ.ಬದಾವಲಿ, ಕೆ.ಎಸ್.ಶಾಂತನಗೌಡ, ಹೆಚ್.ಜಂದಿಸಾಹೇಬ್ ಸದಸ್ಯರಾದ ಭಾಗ್ಯಲಕ್ಷಿö್ಮÃ ಭರಾಡ, ಎಸ್.ರ‍್ರಿಸ್ವಾಮಿ, ಡಿ.ವೆಂಕಟರಮಣ, ಪ್ರಭಾಕರ್, ಶೇಕ್ ಮಹಮ್ಮದ್ ಜೀಲಾನ್, ಸೊನ್ನದ ಗುರುಬಸವರಾಜ್, ದೇವರಾಜ್.ಪಿ.ಹೆಚ್, ಪರಶುರಾಮ, ಗೌರಜ್ಜನವರ್ ಗೀರೀಶ್, ಜಿಪಂ ಯೋಜನಾಧಿಕಾರಿ ಜೆ.ಎಂ.ಅನ್ನದಾನಸ್ವಾಮಿ, ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ವೇತಾ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಟ್ಟಪ್ಪ, ಹೊಸಪೇಟೆ ವಿಭಾಗದ ಕೆಕೆಆರ್‌ಟಿಸಿ ಅಧಿಕಾರಿ ರಾಜಶೇಖರ್, ಜೆಸ್ಕಾಂ ಕಾರ್ಯಪಾಲಕ ಅಭಿಯಂತರ ಸತೀಶ್ ಕುಮಾರ ಸಭೆಯಲ್ಲಿ ಹಾಜರಿದ್ದರು.







