Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ಸಾರ್ವಜನಿಕ ಸೇವೆಗಳಿಗೆ...

ವಿಜಯನಗರ | ಸಾರ್ವಜನಿಕ ಸೇವೆಗಳಿಗೆ ಮಾಹಿತಿ ಹಕ್ಕನ್ನು ಸದ್ಬಳಕೆ ಮಾಡಿಕೊಳ್ಳಿ : ಡಾ.ಶಂಕರನಾಯ್ಕ

ವಾರ್ತಾಭಾರತಿವಾರ್ತಾಭಾರತಿ31 July 2025 7:36 PM IST
share
ವಿಜಯನಗರ | ಸಾರ್ವಜನಿಕ ಸೇವೆಗಳಿಗೆ ಮಾಹಿತಿ ಹಕ್ಕನ್ನು ಸದ್ಬಳಕೆ ಮಾಡಿಕೊಳ್ಳಿ : ಡಾ.ಶಂಕರನಾಯ್ಕ

ವಿಜಯನಗರ(ಹೊಸಪೇಟೆ) : ಜು.31ರಿಂದ ಸರಕಾರಿ ಸೌಲಭ್ಯಗಳು ಹಾಗೂ ಸಾರ್ವಜನಿಕ ಸೇವೆಗಳನ್ನು ಸಮರ್ಪಕವಾಗಿ ಪಡೆಯಲು ಮಾಹಿತಿ ಹಕ್ಕನ್ನು ಸದ್ಭಳಕೆ ಮಾಡಿಕೊಳ್ಳಬೇಕಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಲ್.ಆರ್.ಶಂಕರ್ ನಾಯ್ಕ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ವಿಜಯ ವಿಠಲ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಾಹಿತಿ ಹಕ್ಕು ಕಾರ್ಯಗಾರವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಬುಧವಾರ ಅವರು ಮಾತನಾಡಿದರು,

ಆರ್‌ಟಿಐ ಕಾಯಿದೆಯನ್ನು ತಿಳಿಯುವ ನಿಟ್ಟಿನಲ್ಲಿ ಕಾರ್ಯಾಗಾರ ತುಂಬಾ ಉಪಯುಕ್ತವಾಗಿದೆ. ಬಹುತೇಕರು ಸರ್ಕಾರ ಕಚೇರಿಗಳ ಸೇವೆಗಳು, ಯೋಜನೆಗಳು ಹಾಗೂ ಅನೇಕ ಮಾಹಿತಿಗಳನ್ನು ಪ್ರಶ್ನಿಸುವ ಅನಿವಾರ್ಯತೆ ಇರುತ್ತದೆ. ಇಂತಹವರಿಗೆ ಮಾಹಿತಿ ಹಕ್ಕು ಹೇಗೆ ಬಳಸಬೇಕೆಂಬ ಮಾಹಿತಿ ಇರುವುದಿಲ್ಲ ಹಾಗಾಗೀ ಪ್ರತಿಯೊಬ್ಬರು ಮಾಹಿತಿ ಹಕ್ಕು ಕಾಯಿದೆಯ ಪರಿಚಯ, ವಿಧಾನಗಳನ್ನು ತಿಳಿಯಲು ಈ ಕಾರ್ಯಾಗಾರ ಅನುಕೂಲವಾಗಿದೆ ಎಂದರು.

ಮಾಹಿತಿ ಹಕ್ಕು ಸಂಪನ್ಮೂಲ ವ್ಯಕ್ತಿ ಹೊಳಗುಂದಿ ಎ.ಎಂ.ಪಿ.ವಾಗೇಶ ಅವರು ಮಾತನಾಡಿ, ಎಲ್ಲಾ ಬಟವಾಡೆ ಅಧಿಕಾರಿಗಳು ಹಾಗೂ ಲಿಪಿಕ ನೌಕರರಿಗೆ ಮಾಹಿತಿ ಹಕ್ಕು ಅಧಿನಿಯಮದಲ್ಲಿ ಕಾಯ್ದೆಯ ಉದ್ದೇಶಗಳು, ಸಾರ್ವಜನಿಕ ಪ್ರಾಧಿಕಾರಗಳ ಜವಾಬ್ದಾರಿಗಳು, ಮತ್ತು ನಾಗರಿಕರು ಮಾಹಿತಿಯನ್ನು ಹೇಗೆ ಪಡೆಯಬಹುದು ಎಂಬುದರ ಕುರಿತು ಮಾಹಿತಿಯನ್ನು ನೀಡಿದರು. ನಾಗರಿಕರಿಗೆ ಮಾಹಿತಿ ಪಡೆಯುವ ಹಕ್ಕನ್ನು ಒದಗಿಸುವ ಮೂಲಕ ಸರ್ಕಾರಿ ಕಾರ್ಯಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಉತ್ತೇಜಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.

ಆರ್‌ಟಿಐ ಕಾಯಿದೆ 2005 : ಭಾರತದ ಸಂವಿಧಾನವು ಎಲ್ಲಾ ವ್ಯಕ್ತಿಗಳ ಸಮಾನತೆ, ಸ್ವಾತಂತ್ರ‍್ಯ ಮತ್ತು ನ್ಯಾಯವನ್ನು ಖಾತ್ರಿಪಡಿಸುತ್ತದೆ ಎಲ್ಲರನ್ನೂ ಒಳಗೊಳ್ಳುವ ಸಮಾಜವನ್ನು ಸೂಚ್ಯವಾಗಿ ಕಡ್ಡಾಯಗೊಳಿಸುತ್ತದೆ. ಮಾಹಿತಿ ಹಕ್ಕು ಕಾಯಿದೆ 2005, ನಾಗರಿಕರು ಸಾರ್ವಜನಿಕ ಪ್ರಾಧಿಕಾರಗಳಿಂದ ಮಾಹಿತಿ ಪಡೆಯಲು ಅವಕಾಶ ನೀಡುತ್ತದೆ, ಇದು ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ಆರ್‌ಟಿಐ ಅರ್ಜಿಯು ಸ್ಪಷ್ಟವಾದ ಮತ್ತು ನಿರ್ದಿಷ್ಟವಾದ ಪ್ರಶ್ನೆಗಳನ್ನು ಒಳಗೊಂಡಿರಬೇಕು. ಉದ್ದವಾದ ಅಥವಾ ಅಸ್ಪಷ್ಟವಾದ ಪ್ರಶ್ನೆಗಳು ಅರ್ಜಿಯ ತಿರಸ್ಕಾರಕ್ಕೆ ಕಾರಣವಾಗಬಹುದು. ಕೇವಲ ದಾಖಲೆಗಳು ಮತ್ತು ವಾಸ್ತವಗಳ ಆಧಾರದ ಮೇಲೆ ಮಾತ್ರ ಮಾಹಿತಿ ಕೇಳಬಹುದು. ಊಹಾತ್ಮಕ ಪ್ರಶ್ನೆಗಳನ್ನು ಕೇಳುವುದು ಸೂಕ್ತವಲ್ಲ. ವೈಯಕ್ತಿಕ ದೂರುಗಳನ್ನು ಪರಿಹರಿಸಲು, ವಿವಾದಗಳನ್ನು ಬಗೆಹರಿಸಲು ಆರ್‌ಟಿಐ ಕಾಯಿದೆಯನ್ನು ದುರುಪಯೋಗಪಡಿಸಿಕೊಳ್ಳಬಾರದು. ಇದು ಸರ್ಕಾರಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯಲು ರೂಪಿಸಲಾದ ಕಾಯ್ದೆಯಾಗಿದೆ ಎಂದರು.

ಈ ಕಾರ್ಯಗಾರದಲ್ಲಿ ಆರ್‌ಸಿಹೆಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಭಾಸ್ಕರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ಗೌಡ ಸೇರಿದಂತೆ ಆರೋಗ್ಯ ಇಲಾಖೆಯ ಅನುಷ್ಠಾನ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X