Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagar | ಅಭಿವೃದ್ಧಿ ಕಾಮಗಾರಿಗಳ...

Vijayanagar | ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಶಾಸಕ ಗವಿಯಪ್ಪ

ವಾರ್ತಾಭಾರತಿವಾರ್ತಾಭಾರತಿ8 May 2026 5:50 PM IST
share
Vijayanagar | ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಶಾಸಕ ಗವಿಯಪ್ಪ

ಹೊಸಪೇಟೆ/ವಿಜಯನಗರ: ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್‌.ಆರ್‌.ಗವಿಯಪ್ಪ ಅವರು ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದ ಆಡಿಟೋರಿಯಂ ಹಾಲ್‌ನಲ್ಲಿ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ “ಪ್ರಗತಿ ಪರಿಶೀಲನೆ ಸಭೆ” ನಡೆಸಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಮಗ್ರ ಚರ್ಚೆ ನಡೆಸಿದರು.

ಸಭೆಯಲ್ಲಿ ಪಿಡಬ್ಲ್ಯೂಡಿ, ಆರ್‌ಡಿಪಿಆರ್, ಲ್ಯಾಂಡ್ ಆರ್ಮಿ, ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳ ಮಾಹಿತಿ ನೀಡಿದರು. ಇದೇ ವೇಳೆ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಬಂದಿರುವ ಅನುದಾನವನ್ನು ಯಾವ ಯಾವ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಲಾಗುತ್ತಿದೆ ಎಂಬುದರ ಕುರಿತು ಶಾಸಕರು ವಿವರಿಸಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯೋಜನೆ, ಡಿಎಂಎಫ್ ಅನುದಾನ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅನುದಾನ, ಮುಖ್ಯಮಂತ್ರಿ ವಿಶೇಷ ಅನುದಾನ ಹಾಗೂ ಶಾಸಕರ ಅನುದಾನ ಸೇರಿದಂತೆ ವಿವಿಧ ಮೂಲಗಳಿಂದ ಬಂದಿರುವ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಹೊಸಪೇಟೆ ನಗರದ ವಿವಿಧ ವಾರ್ಡ್‌ಗಳ ಅಭಿವೃದ್ಧಿಗಾಗಿ ಸುಮಾರು 3,523.92 ಲಕ್ಷ ರೂ. ಹಾಗೂ ಕಮಲಾಪುರ ಪಟ್ಟಣ ಪಂಚಾಯಿತಿಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸುಮಾರು 700 ಲಕ್ಷ ರೂ. ಅನುದಾನ ಮೀಸಲಿರಿಸಲಾಗಿದೆ. ಈ ಅನುದಾನವನ್ನು ರಸ್ತೆ ಅಭಿವೃದ್ಧಿ, ಶೌಚಾಲಯ ನಿರ್ಮಾಣ, ಡ್ರೈನೇಜ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಬಳಸಲಾಗುತ್ತಿದೆ ಎಂದು ತಿಳಿಸಿದರು.

“ಹೊಸಪೇಟೆ ಅಭಿವೃದ್ಧಿಯತ್ತ ಹೆಜ್ಜೆ ಇಡುತ್ತಿದೆ. ಸಾರ್ವಜನಿಕರು ಹಾಗೂ ಅಧಿಕಾರಿಗಳು ಕೈಜೋಡಿಸಿದರೆ ಇನ್ನಷ್ಟು ವೇಗವಾಗಿ ಅಭಿವೃದ್ಧಿ ಸಾಧ್ಯ” ಎಂದು ಶಾಸಕರು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಸಾರ್ವಜನಿಕರು, ನಗರಸಭೆ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ತಮ್ಮ ಸಮಸ್ಯೆಗಳು ಮತ್ತು ಅಭಿಪ್ರಾಯಗಳನ್ನು ಶಾಸಕರ ಮುಂದಿಟ್ಟರು. ಎಲ್ಲರ ಅಭಿಪ್ರಾಯಗಳನ್ನು ಆಲಿಸಿದ ಶಾಸಕರು, ಜನಪರ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಸಿ ವಿವೇಕಾನಂದ ಪಿ., ಯೋಜನಾ ನಿರ್ದೇಶಕ ಮನೋಹರ್, ಪೌರಾಯುಕ್ತ ಶಿವಕುಮಾರ್, ಇಒ ಆಲಂಬಾಷಾ, ಎಇಇ ಸೈಯದ್ ಮನ್ಸೂರ್ ಅಹ್ಮದ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರವಿ ನಾಯಕ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Vijayanagar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X