ವಿಜಯನಗರ | ನರೇಗಾ ಕೆಲಸದ ವೇಳೆ ಕುಸಿದು ಬಿದ್ದು ಕಾರ್ಮಿಕ ಮೃತ್ಯು

ಡಿ.ಭರಮಪ್ಪ
ವಿಜಯನಗರ : ನರೇಗಾ ಕೆಲಸಕ್ಕೆ ಹೋದ ವೇಳೆ ಕೂಲಿ ಕಾರ್ಮಿಕನೊರ್ವ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರೇಮಜ್ಜಿಗೆರೆ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಡಿ.ಭರಮಪ್ಪ (65) ಎಂದು ಗುರುತಿಸಲಾಗಿದೆ.
ಕೆ.ಕಲ್ಲಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಅರೇಮಜ್ಜಿಗೇರಿ ಗ್ರಾಮದ ಹಳ್ಳವೊಂದರಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹೂಳೆತ್ತುವ ಕೆಲಸ ನಿರ್ವಹಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ತಾ.ಪಂ ಇಒ ವೈ.ಎಚ್.ಚಂದ್ರಶೇಖರ್, ನರೇಗಾ ಸಹಾಯಕ ನಿರ್ದೇಶಕ ಸೋಮಶೇಖರ್, ಗ್ರಾ.ಪಂ ಅಧ್ಯಕ್ಷೆ ನೇತ್ರಾವತಿ ವೀರುಪಾಕ್ಷಪ್ಪ, ನೀಲಗುಂದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅರ್ಪಿತ, ಪಿಡಿಓ ಅನಂದನಾಯ್ಕ್, ಇಂಜಿನಿಯರ್ ಹರೀಶ್ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸರ್ಕಾರದಿಂದ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು.
Next Story