ವಿಜಯನಗರ | ನ.11ರಂದು ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ
ವಿಜಯನಗರ(ಹೊಸಪೇಟೆ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ನ.11 ರಂದು ಬೆಳಿಗ್ಗೆ 10ಕ್ಕೆ ಛಲುವಾದಿಕೇರಿಯಲ್ಲಿ ವೀರವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಝಮೀರ್ ಅಹ್ಮದ್‌ಖಾನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಳ್ಳಾರಿ ಮತ್ತು ವಿಜಯನಗರ ಸಂಸದ ಈ.ತುಕಾರಾಮ್, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹೂವಿನಹಡಗಲಿ ಶಾಸಕ ಎಲ್.ಕೃಷ್ಣನಾಯಕ, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ನಮೋಶಿ, ವೈ.ಎಂ.ಸತೀಶ್, ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ.ಶಿವಮೂರ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಎನ್.ಚಿನ್ನಸ್ವಾಮಿ ಸೊಸಲೆ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮುಹಮ್ಮದ್ ಅಲಿ ಅಕ್ರಮ್ ಶಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ್ ರಂಗಣ್ಣನವರ್ ಸ್ವಾಗತಿಸಿದ್ದಾರೆ.
ವೇದಿಕೆ ಕಾರ್ಯಕ್ರಮದ ನಂತರ ಬೆಳಿಗ್ಗೆ 11 ಗಂಟೆಗೆ ವೀರವನಿತೆ ಒನಕೆ ಓಬವ್ವ ಭಾವಚಿತ್ರ ಮೆರವಣಿಗೆಯನ್ನು ನಗರದ ಛಲವಾದಿಕೇರಿಯಿಂದ ಮದಕರಿ ನಾಯಕ ವೃತ್ತ, ಮುಖ್ಯ ಬಜಾರ್, ಗಾಂಧಿ ಚೌಕ್, ನಗರಸಭೆ ರಸ್ತೆ ಡಾ.ಪುನೀತ್ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಛಲವಾದಿಕೇರಿಯವರಗೆ ಭವ್ಯ ಮರೆವಣಿಗೆ ನಡೆಯಲಿದೆ.







