ವಿಜಯನಗರ | ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ವಿಜಯನಗರ (ಹೊಸಪೇಟೆ) : ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2025-26ನೇ ಸಾಲಿಗೆ ಹೊಸದಾಗಿ ಪ್ರವೇಶ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಇತರೆ ವರ್ಗದ ಪಿಯುಸಿ, ಐಟಿಐ ಮತ್ತು ಡಿಪ್ಲೋಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಜೂನ್ 20 ರೊಳಗಾಗಿ ವೆಬ್‌ಸೈಟ್ https://shp.karnataka.gov.in/bcwd ಮೂಲಕ ಅರ್ಜಿ ಸಲ್ಲಿಸಬಹುದು.
ತಾಲೂಕಿನ ಚಿತ್ತವಾಡ್ಗಿ, ಎಪಿಎಂಸಿ ಆವರಣ, ಚಪ್ಪರದಹಳ್ಳಿ, ಸಂಕ್ಲಾಪುರದ ಮೆಟ್ರಿಕ್ ನಂತರದ, ಬಾಲಕರ ವಿದ್ಯಾರ್ಥಿ ನಿಲಯಗಳು ಹಾಗೂ ಆರ್‌ಟಿಓ ಆಫೀಸ್ ಹಿಂಭಾಗದ ಎರಡು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಪಡೆಯಬಹುದಾಗಿದೆ. ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ವೆಬ್‌ಸೈಟ್ www.bcwd.karnataka.gov.in ಅನ್ನು ನೋಡಬಹುದಾಗಿದೆ ಹಾಗೂ ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳು ಇದ್ದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗೆ ಸಂಪರ್ಕಿಸಬಹುದು ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







