Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ಆರಕ್ಷಕರ ಸೇವೆ, ಶೌರ್ಯ...

ವಿಜಯನಗರ | ಆರಕ್ಷಕರ ಸೇವೆ, ಶೌರ್ಯ ಅರ್ಪಣಾ ಮನೋಭಾವದ ಸಂಕೇತ : ಎಸ್ಪಿ ಶ್ರೀಹರಿಬಾಬು

ವಾರ್ತಾಭಾರತಿವಾರ್ತಾಭಾರತಿ3 April 2025 11:42 PM IST
share
ವಿಜಯನಗರ | ಆರಕ್ಷಕರ ಸೇವೆ, ಶೌರ್ಯ ಅರ್ಪಣಾ ಮನೋಭಾವದ ಸಂಕೇತ : ಎಸ್ಪಿ ಶ್ರೀಹರಿಬಾಬು

ವಿಜಯನಗರ(ಹೊಸಪೇಟೆ) : ದೇಶದಲ್ಲಿ ಶಾಂತಿ ನೆಮ್ಮದಿ ಇದ್ದರೆ ಅದು ಪೊಲೀಸರಿಂದ ಮಾತ್ರ ಸಾಧ್ಯ ಮತ್ತು ಪೊಲೀಸರ ಸೇವೆ, ಶೌರ್ಯ ಹಾಗೂ ಅರ್ಪಣಾ ಮನೋಭಾವದ ಸಂಕೇತವಾಗಿದೆ ಎಂದು ಪೊಲೀಸ್ ಅಧೀಕ್ಷಕ ಶ್ರೀಹರಿಬಾಬು.ಬಿ.ಎಲ್. ಅಭಿಪ್ರಾಯಪಟ್ಟಿದ್ದಾರೆ.

ನಗರದ ಜಿಲ್ಲಾ ಸಶಸ್ತ್ರ ಪೊಲೀಸ್ ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ ಪೊಲೀಸ್ ಧ್ವಜ ಬಿಡುಗಡೆ ಮಾಡಿ ಮಾತನಾಡಿದ ಅವರು, ಪೊಲೀಸ್ ಧ್ವಜ ವಿತರಣೆಯಿಂದ ಇಲಾಖೆಯಲ್ಲಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ಪೊಲೀಸ್ ಅಧಿಕಾರಿಗಳ ಮತ್ತು ಪೊಲೀಸ್ ಸಿಬ್ಬಂದಿಯವರ ಸೇವೆ, ತ್ಯಾಗ ಹಾಗೂ ಬಲಿದಾನಗಳನ್ನು ಸ್ಮರಿಸುವ ದಿನವಾಗಿದೆ ಎಂದರು.

1984ಕ್ಕಿಂತ ಮೊದಲು ನ.2ನೇ ದಿನ ಪೊಲೀಸ್ ಕಲ್ಯಾಣ ದಿನವೆಂದು ಹಾಗೂ ಎ.2ನೇ ದಿನವನ್ನು ಪೊಲೀಸ್ ಧ್ವಜ ದಿನಾಚರಣೆ ಎಂದು ಆಚರಿಸಲಾಗುತ್ತಿತ್ತು. 1984ರಿಂದ ಈ ಧ್ವಜ ದಿನಚಾರಣೆ ಹಾಗೂ ಕಲ್ಯಾಣ ದಿನವನ್ನು ಒಗ್ಗೂಡಿಸಿ ಎ.2ರಂದು ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಮತ್ತು ಪೊಲೀಸ್ ಕಲ್ಯಾಣ ದಿನಾಚರಣೆ ಎಂದು ಆಚರಣೆ ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ನಿವೃತ್ತ ಪಿಎಸ್‌ಐಗಳಾದ ಎಂ.ಮುನಿರತ್ನ, ಕೆ.ಮಲಿಕ್ ಸಾಹೇಬ್ ಮಾತನಾಡಿದರು.

ಧ್ವಜ ವಂದನೆ ಬಳಿಕ ಅಕರ್ಷಕ ಪಥ ಸಂಚಲನ ನಡೆಸಲಾಯಿತು. ಪಥ ಸಂಚಲನದಲ್ಲಿ ಆರ್‌ಪಿಐ ಪರೇಡ್ ಕಮಾಂಡರ್ ಗೋವಿಂದ ಎ., ಆರ್‌ಎಸ್‌ಐ ಸಹಾಯಕ ಕಮಾಂಡರ್ ಮಂಜುನಾಥ ದಳವಾಯಿ, ಕಮಲಾಪುರ ಪಿಎಸ್‌ಐ ಸಂತೋಷ, ಹಗರಿಬೊಮ್ಮನಹಳ್ಳಿ ಪಿಎಸ್‌ಐ ಬಸವರಾಜ್ ಅಡವಿಭಾವಿ, ಕೊಟ್ಟೂರು ಪಿಎಸ್‌ಐ ಗೀತಾಂಜಲಿ ಶಿಂಧೆ, ಹೀರೆಹಡಗಲಿ ಪಿಎಸ್‌ಐ ಭರತ ಸಿ.ಬಿ., ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆರ್‌ಎಸ್‌ಐ ಲಾಳೆಮಶಾಕ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ನಿವೃತ್ತ ಪಿಎಸ್‌ಐ ಯು.ರವಿಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಲೀಮ್ ಪಾಷಾ, ಸೇರಿದಂತೆ ನಿವೃತ್ತ ಮಾಜಿ ಸೈನಿಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X