ವಿಜಯನಗರ | ಹಿರಿಯ ಪತ್ರಕರ್ತ ಕೆ.ಲಕ್ಷ್ಮಣ್ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

ವಿಜಯನಗರ /ಹೊಸಪೇಟೆ : ವಿಜಯನಗರ ಜಿಲ್ಲೆಯ ಹಿರಿಯ ಪತ್ರಕರ್ತರಾದ ಕೆ. ಲಕ್ಷ್ಮಣ್ ಅವರಿಗೆ 2025ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು ಸಿಎಂ ಸಿದ್ದರಾಮಯ್ಯನವರು ಪ್ರದಾನ ಮಾಡಿದರು.
ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶುಕ್ರವಾರ ಸಂಜೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯನವರು ಪ್ರಶಸ್ತಿ ಪ್ರದಾನ ಮಾಡಿದರು.
ಶಿವಾಜಿನಗರ ಕ್ಷೇತ್ರದ ಶಾಸಕ ರಿಝ್ವಾನ್ ಅರ್ಶದ್, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್, ಕಾರ್ಯದರ್ಶಿ ಕಾವೇರಿ, ನಾಡೋಜ ಹಂಪನಾ ನಾಗರಾಜ್, ನಾಡಕ ಅಕಾಡೆಮಿ ಅಧ್ಯಕ್ಷ ನಾಗರಾಜ್ ಮೂರ್ತಿ ಸೇರಿದಂತೆ ಇತರರು ಇದ್ದರು.
Next Story





