ವಿಜಯನಗರ | ಡೆಂಗ್ಯೂ, ಚಿಕನ್‌ಗುನ್ಯ, ಮಲೇರಿಯಾ ಹರಡದಂತೆ ಮುಂಜಾಗೃತೆ ವಹಿಸಿ : ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ

ವಿಜಯನಗರ(ಹೊಸಪೇಟೆ) : ಸಾರ್ವಜನಿಕರು ಡೆಂಗ್ಯೂ, ಚಿಕನ್‌ಗುನ್ಯ ಹಾಗೂ ಮಲೇರಿಯಾ ರೋಗಗಳು ಹರಡದಂತೆ ಅಗತ್ಯ ಮುಂಜಾಗೃತಾ ಕ್ರಮವಹಿಸುವ ಮೂಲಕ ರೋಗಗಳು ಹರಡುವುದನ್ನು ತಡೆಗಟ್ಟಬಹುದು ಎಂದು ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ ಹೇಳಿದರು.
ನಗರದ ಮಹಿಳಾ ಸಮಾಜ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ವತಿಯಿಂದ ಏರ್ಪಡಿಸಿದ್ದ ಡೆಂಗ್ಯೂ, ಚಿಕನ್ ಗುನ್ಯ ಮತ್ತು ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತೆ ಕ್ರಮ ವಹಿಸುವ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ವೇಳೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಧರ್ಮನಗೌಡ ಅವರು ಶಾಲೆಯ ಮಕ್ಕಳಿಗೆ ಲಾರ್ವಾ ಪ್ರಾತಿಕ್ಷಿಕೆ ಮೂಲಕ ಮಾಹಿತಿ ನೀಡಿದರು.
ಬಳಿಕ ಡೆಂಗ್ಯೂ, ಚಿಕನ್ ಗುನ್ಯ, ಮಲೇರಿಯಾ ನಿಯಂತ್ರಣ ಕ್ರಮಗಳ ಕುರಿತು ಜಾಗೃತಿ ಮೂಡಿಸುವ ಪೋಸ್ಟರ್‌ನ್ನು ಬಿಡುಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತಾಧಿಕಾರಿ ರಾಘವೇಂದ್ರ ಅಚಾರ್, ಆರೋಗ್ಯ ಇಲಾಖೆ ಮೇಲ್ವಿಚಾರಕ ಚನ್ನಬಸವ, ಸಿಬ್ಬಂದಿ ಕೌಶಿಕ್ ಇದ್ದರು.