ವಿಜಯನಗರ | ಸಕಾಲದಲ್ಲಿ ಸೇವೆ ಸಲ್ಲಿಸಿದ ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಿಂದ ಪ್ರಶಂಸೆ
ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಸಲ್ಲಿಸಿದ್ದಕ್ಕೆ ವಿಜಯನಗರ ಜಿಲ್ಲೆಗೆ ಪ್ರಥಮ ಸ್ಥಾನ

ಹೊಸಪೇಟೆ : ಸಕಾಲ ಕಾರ್ಯಕ್ಷಮತೆಯಲ್ಲಿ ಜುಲೈ-2025ರ ಮಾಹೆಯಲ್ಲಿ ವಿಜಯನಗರ ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನ [1st Rank] ಪಡೆದಿರುವುದಕ್ಕೆ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಇಲಾಖಾ ಅಧಿಕಾರಿಗಳಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸುವ ನಿಟ್ಟಿನಲ್ಲಿ ವಿಜಯನಗರ ಜಿಲ್ಲೆಯಲ್ಲಿ ಒಟ್ಟು 85,978 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕೃತವಾಗಿದ್ದು, ಈ ಪೈಕಿ ಒಟ್ಟು 84,904 ಅರ್ಜಿಗಳನ್ನು ನಿಗಧಿತ ಅವಧಿಯೊಳಗಾಗಿ ವಿಲೇವಾರಿ ಮಾಡಿ ಶೇ.98.75 ರಷ್ಟು intime disposal rate ಕಾಪಾಡಿಕೊಂಡಿರುತ್ತದೆ.
ಜಿಲ್ಲಾಧಿಕಾರಿಗಳು ಸಾರ್ವಜನಿಕರ ಸೇವೆಗಳನ್ನು ಅವಧಿಯೊಳಗೇ ವಿಲೇಮಾಡಿದ ಎಲ್ಲಾ ಅಧಿಕಾರಿಗಳಿಗೆ ಪ್ರಶಂಸಿಸಿ ಮುಂದಿನ ದಿನಗಳಲ್ಲಿಯೂ ಇದೇ ರೀತಿ ಸಾರ್ವಜನಿಕರ ಎಲ್ಲಾ ಸೇವೆಗಳನ್ನು ಅವಧಿಯೊಳಗೆ ವಿಳಂಭಕ್ಕೆ ಆಸ್ಪದ ನೀಡದಂತೆ ಒದಗಿಸಲು ಸೂಚಿಸಿದರು.
Next Story





