ವಿಜಯನಗರ | ವಾಲ್ಮೀಕಿ ಜಯಂತಿ ಆಚರಣೆ

ವಿಜಯನಗರ (ಹೊಸಪೇಟೆ): ವಾಲ್ಮೀಕಿ ಜಯಂತೋತ್ಸವವನ್ನು ಶಾಸಕ ಹೆಚ್.ಆರ್. ಗವಿಯಪ್ಪ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಭಾವಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಶಾಸಕರಾದ ಗವಿಯಪ್ಪ ಅವರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ಉಪದೇಶಗಳು ಮಾನವ ಕುಲಕ್ಕೆ ಮಾರ್ಗದೀಪವಾಗಿವೆ. ಅವರ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ, ಅದು ಸಮೃದ್ಧಿ ಮತ್ತು ಸಾರ್ಥಕತೆಯನ್ನು ತರಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ವೇಳೆ ಪರಿಶಿಷ್ಟ ಪಂಗಡದ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ದೇವದಾಸಿ ಮಹಿಳೆಯರನ್ನು ಮದುವೆಯಾದವರಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.
Next Story





