ವಿಜಯನಗರ | ಅ.9 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ
ವಿಜಯನಗರ(ಹೊಸಪೇಟೆ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಶೇಷ ಚೇತನರ ಹಾಗೂ ಹಿರಿಯ ಸಬಲೀಕರಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಶೇಷ ಚೇತನರಿಗಾಗಿ ಮತ್ತು ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ವಿವಿಧ ಸಂಘ, ಸಂಸ್ಥೆಗಳು ಸಹಯೋಗದಲ್ಲಿ ಅ.9 ರಂದು ಬೆ.11ಕ್ಕೆ ಶ್ರೀಸಾಯಿಲೀಲಾ ರಂಗಮಂದಿರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಝಮೀರ್ ಅಹ್ಮದ್ ಖಾನ್ ಅವರು ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಳ್ಳಾರಿ ಮತ್ತು ವಿಜಯನಗರ ಸಂಸದ ಈ.ತುಕಾರಾಮ್, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹೂವಿನಹಡಗಲಿ ಶಾಸಕ ಎಲ್.ಕೃಷ್ಣನಾಯಕ, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ನಮೋಶಿ, ವೈ.ಎಂ.ಸತೀಶ್, ಹೊಸಪೇಟೆ ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ.ಎನ್, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಶಿವಮೂರ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿ ಕವಿತಾ.ಎಸ್ ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮುಹಮ್ಮದ್ ಅಲಿ ಅಕ್ರಮ್ ಶಾ ಇವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಹೊಸಪೇಟೆ ಬ್ರಹ್ಮಕುಮಾರಿ ಈಶ್ವರೀಯ ಮಹಾವಿದ್ಯಾಲಯದ ಸಂಚಾಲಕರಾದ ಬ್ರಹ್ಮಕುಮಾರಿ ಮಾನಸರವರು ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರಾಮಾಂಜನೇಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಎಸ್.ಶ್ವೇತಾ ಇವರು ಸ್ವಾಗತಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.







