Vijayanagara | ಅಕ್ರಮವಾಗಿ ಸಾಗಿಸುತ್ತಿದ್ದ 20.55 ಕ್ವಿಂಟಲ್ ಪಡಿತರ ಅಕ್ಕಿ ಜಪ್ತಿ

ವಿಜಯನಗರ (ಹೊಸಪೇಟೆ) : ಜಿಲ್ಲೆಯ ಕೊಟ್ಟೂರು ತಾಲೂಕು ಪೊಲೀಸ್ ಠಾಣೆ ವ್ಯಾಪ್ತಿಯ ಹ್ಯಾಳ್ಯಾ ಗ್ರಾಮದ ಬಳಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.
ದಾಳಿಯಲ್ಲಿ ಅಂದಾಜು 42,127 ರೂ, ಮೌಲ್ಯದ 20.55 ಕ್ವಿಂಟಲ್ ಪಡಿತರ ಅಕ್ಕಿ ಹಾಗೂ ಅಕ್ಕಿ ಸಾಗಾಟಕ್ಕೆ ಬಳಸಲಾಗುತ್ತಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ.
ಈ ಸಂಬಂಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.
Next Story




