ವಿಜಯನಗರ : ಅನಧಿಕೃತವಾಗಿ ದಾಸ್ತಾನು ಮಾಡಲಾದ 216 ಸಿಲಿಂಡರ್ ಜಪ್ತಿ

ವಿಜಯನಗರ(ಹೊಸಪೇಟೆ): ಕೂಡ್ಲಿಗಿ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ಗ್ಯಾಸ್ ಸಿಲೆಂಡರ್ ಗಳನ್ನು ಅನಧಿಕೃತವಾಗಿ ದಾಸ್ತಾನು ಮಾಡಲಾದ ಸ್ಥಳದ ಮೇಲೆ ದಾಳಿ ಮಾಡಿ ಒಟ್ಟು 216 ಸಿಲಿಂಡರ್ ಗಳನ್ನು ಜಪ್ತಿ ಮಾಡಲಾಗಿದೆ.
ಇದರ ಒಟ್ಟು ಮೌಲ್ಯ ರೂ.4,38,306 ಆಗಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story




