Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ವನ್ಯಜೀವಿಗಳ...

Vijayanagara | ವನ್ಯಜೀವಿಗಳ ಹಕ್ಕುಗಳಿಗೆ ಧಕ್ಕೆ ಬಾರದಂತೆ ಜವಾಬ್ದಾರಿಯಿಂದ ನಡೆದುಕೊಳ್ಳಿ: ಜಾಹ್ನವಿ

ವಾರ್ತಾಭಾರತಿವಾರ್ತಾಭಾರತಿ8 Oct 2026 8:05 PM IST
share
Vijayanagara | ವನ್ಯಜೀವಿಗಳ ಹಕ್ಕುಗಳಿಗೆ ಧಕ್ಕೆ ಬಾರದಂತೆ ಜವಾಬ್ದಾರಿಯಿಂದ ನಡೆದುಕೊಳ್ಳಿ: ಜಾಹ್ನವಿ

ವಿಜಯನಗರ (ಹೊಸಪೇಟೆ) : ಮಾನವನಿಗೆ ಎಷ್ಟು ಹಕ್ಕುಗಳಿವೆಯೋ, ಅಷ್ಟೇ ಹಕ್ಕುಗಳು ವನ್ಯಜೀವಿಗಳಿಗೂ ಇವೆ. ಮೂಕ ಜೀವಿಗಳು ತಮ್ಮ ಹಕ್ಕುಗಳ ಉಲ್ಲಂಘನೆಯಾದಾಗ ಪ್ರಶ್ನಿಸಿ ನ್ಯಾಯ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಅವುಗಳ ಹಕ್ಕುಗಳಿಗೆ ಧಕ್ಕೆ ಬಾರದಂತೆ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಕರೆ ನೀಡಿದರು.

ತಾಲೂಕಿನ ಕಮಲಾಪುರ ದರೋಜಿ ನಿಸರ್ಗಧಾಮದ ಅರಣ್ಯ ಪ್ರದೇಶದಲ್ಲಿ ಗುರುವಾರ ಆಯೋಜಿಸಿದ್ದ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭೂಮಿಯ ಮೇಲೆ ಬದುಕುವ ಹಕ್ಕು ಪ್ರತಿಯೊಂದು ಜೀವಿಗೂ ಸಮಾನವಾಗಿದೆ. ಮಾನವರು ಇತರ ಜೀವಿಗಳೊಂದಿಗೆ ಶಾಂತಿಯುತವಾಗಿ ಸಹಬಾಳ್ವೆ ನಡೆಸುವ ಮೂಲಕ ಪ್ರಕೃತಿಯ ಸಮತೋಲನವನ್ನು ಕಾಪಾಡಬೇಕಿದೆ ಎಂದರು.

ವನ್ಯಜೀವಿಗಳು ತಮ್ಮ ಸಮಸ್ಯೆಗಳನ್ನು ಮನುಷ್ಯರಂತೆ ವ್ಯಕ್ತಪಡಿಸಲು ಸಾಧ್ಯವಿಲ್ಲ. ಆದ್ದರಿಂದ ಸಂವಹನ ನಡೆಸುವ ಸಾಮರ್ಥ್ಯ ಹೊಂದಿರುವ ನಾವು ಅವುಗಳ ಧ್ವನಿಯಾಗಿ ನಿಲ್ಲಬೇಕು. ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಅರಣ್ಯ ನಾಶ ಹಾಗೂ ವನ್ಯಜೀವಿಗಳ ಸಂಖ್ಯೆ ಕ್ಷೀಣಿಸುವುದರಿಂದ ಪರಿಸರದ ಸಮತೋಲನದಲ್ಲಿ ಏರುಪೇರು ಉಂಟಾಗಿ ಹವಾಮಾನ ವೈಪರೀತ್ಯ, ಮಳೆಯ ಕೊರತೆ ಹಾಗೂ ನೀರಿನ ಅಭಾವ ಸೇರಿದಂತೆ ಹಲವು ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಅರಣ್ಯ ಇಲಾಖೆಯೊಂದರ ಹೊಣೆಗಾರಿಕೆ ಮಾತ್ರವಲ್ಲ. ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಇಲಾಖೆಯೊಂದಿಗೆ ಕೈಜೋಡಿಸಿ ಸಂರಕ್ಷಣಾ ಕಾರ್ಯಗಳಲ್ಲಿ ಭಾಗಿಯಾಗಬೇಕು. ಮರಗಳನ್ನು ಬೆಳೆಸುವುದು, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ಅರಣ್ಯ ಒತ್ತುವರಿ ತಡೆಯುವುದು ಹಾಗೂ ಕಾಡ್ಗಿಚ್ಚು ನಿಯಂತ್ರಣಕ್ಕೆ ಸಹಕರಿಸುವಂತಹ ಸಣ್ಣ ಹೆಜ್ಜೆಗಳ ಮೂಲಕವೂ ಪರಿಸರ ರಕ್ಷಣೆಗೆ ಮಹತ್ವದ ಕೊಡುಗೆ ನೀಡಬಹುದು ಎಂದರು.

ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಅ.2ರಿಂದ 9ರವರೆಗೆ ಶಾಲಾ-ಕಾಲೇಜುಗಳಲ್ಲಿ ವಿವಿಧ ಸ್ಪರ್ಧೆಗಳು, ಬೈಕ್ ರ‍್ಯಾಲಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ವರ್ಷದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ‘ಆವಾಸಸ್ಥಾನಗಳನ್ನು ಜೋಡಿಸುವುದು, ವನ್ಯಜೀವಿಗಳನ್ನು ರಕ್ಷಿಸುವುದು’ ಎಂಬ ಆಶಯದಡಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.

ರಸ್ತೆ, ಕಾಲುವೆ, ಡ್ಯಾಂ ಹಾಗೂ ಕಟ್ಟಡ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಂದ ಕಾಡುಗಳು ಪ್ರತ್ಯೇಕ ಪ್ರದೇಶಗಳಾಗಿ ವಿಭಜನೆಯಾಗುತ್ತಿವೆ. ಇದರಿಂದ ವನ್ಯಜೀವಿಗಳ ಸಾಂಪ್ರದಾಯಿಕ ಸಂಚಾರ ಮಾರ್ಗಗಳಿಗೆ ಅಡ್ಡಿಯುಂಟಾಗಿ, ಅವುಗಳ ಸಂಚಾರ ಹಾಗೂ ಆಹಾರ ಹುಡುಕಾಟಕ್ಕೆ ತೊಂದರೆಯಾಗುತ್ತಿದೆ. ಇದರ ಪರಿಣಾಮವಾಗಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿರುವುದರ ಜೊತೆಗೆ ಪ್ರತಿವರ್ಷ ಅನೇಕ ವನ್ಯಜೀವಿಗಳು ರಸ್ತೆ ಅಪಘಾತಗಳಲ್ಲಿ ಮೃತಪಟ್ಟಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದು ತಿಳಿಸಿದರು.

ಕಾಡು ಎಂದರೆ ಕೇವಲ ಮರ-ಗಿಡಗಳ ಸಮೂಹವಲ್ಲ. ಅದೊಂದು ಸಂಕೀರ್ಣ ಪರಿಸರ ವ್ಯವಸ್ಥೆ. ಪದೇಪದೇ ಸಂಭವಿಸುವ ಕಾಡ್ಗಿಚ್ಚಿನಿಂದ ಕ್ರಿಮಿಕೀಟಗಳು, ಚಿಟ್ಟೆಗಳು ಸೇರಿದಂತೆ ಹಲವು ಜೀವಿಗಳು ಹಾಗೂ ಸಸ್ಯ ಪ್ರಭೇದಗಳು ನಾಶವಾಗುತ್ತವೆ. ಚಿಟ್ಟೆ ಮತ್ತು ಜೇನುನೊಣಗಳಂತಹ ಪರಾಗಸ್ಪರ್ಶಕ ಜೀವಿಗಳ ಸಂಖ್ಯೆ ಕುಸಿದರೆ ಪರಾಗಸ್ಪರ್ಶ ಪ್ರಕ್ರಿಯೆಯ ಮೇಲೆ ಪರಿಣಾಮ ಬಿದ್ದು ಕೃಷಿ ಇಳುವರಿ ಕಡಿಮೆಯಾಗಬಹುದು. ಇದು ಮುಂದಿನ ದಿನಗಳಲ್ಲಿ ಆಹಾರ ಭದ್ರತೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಅರಣ್ಯವನ್ನು ಸಂರಕ್ಷಿಸುವುದು ಕೇವಲ ವನ್ಯಜೀವಿಗಳಿಗಾಗಿ ಮಾತ್ರವಲ್ಲ, ಮಾನವ ಆರೋಗ್ಯ ಮತ್ತು ಭವಿಷ್ಯಕ್ಕಾಗಿ ಕೂಡ ಅಗತ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಕಮಲಾಪುರ ದರೋಜಿ ನಿಸರ್ಗಧಾಮದಲ್ಲಿ ವನ್ಯಜೀವಿಗಳ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿತ್ತು. ಅರಣ್ಯ ಇಲಾಖೆಯಿಂದ ವನ್ಯಜೀವಿ ಸಪ್ತಾಹದ ಅಂಗವಾಗಿ ಶಾಲಾ ಮಕ್ಕಳಿಗೆ ಚಿತ್ರಕಲೆ, ಪ್ರಬಂಧ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಪ್ರಶಸ್ತಿ ಹಾಗೂ ಬಹುಮಾನ ವಿತರಿಸಲಾಯಿತು.

ಈ ವೇಳೆ ಕಮಲಾಪುರ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನವನದ ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್ ನಾಯಕ್, ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಾರ್ಕಂಡೇಯ, ವನ್ಯಜೀವಿ ಸಂರಕ್ಷಕರು ಹಾಗೂ ಪರಿಸರವಾದಿ ಪಂಪಯ್ಯ ಸ್ವಾಮಿ, ಉರಗ ತಜ್ಞ ವೇಣುಗೋಪಾಲ್ ಸೇರಿದಂತೆ ವಲಯ ಅರಣ್ಯಾಧಿಕಾರಿಗಳು, ಉಪ ವಲಯ ಅರಣ್ಯಾಧಿಕಾರಿಗಳು, ಗಸ್ತು ವನಪಾಲಕರು ಹಾಗೂ ಅರಣ್ಯ ವೀಕ್ಷಕರು ಉಪಸ್ಥಿತರಿದ್ದರು.

Tags

Wildlifevijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X