Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಬೀದಿ ನಾಯಿಗಳ ಹಾವಳಿ...

Vijayanagara | ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ6 Nov 2026 7:17 PM IST
share
Vijayanagara | ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಮನವಿ

ಹೊಸಪೇಟೆ/ವಿಜಯನಗರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹಾಗೂ ನಾಯಿ ಕಡಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ರಕ್ಷಣೆ ಒದಗಿಸುವಂತೆ ಆಗ್ರಹಿಸಿ, ಶ್ರೀ ಸಸ್ಯ ಶ್ಯಾಮಲಾ ಸಂರಕ್ಷಣಾ ಸೇವಾ ಟ್ರಸ್ಟ್ (ರಿ.) ವತಿಯಿಂದ ವಿಜಯನಗರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ವಿ. ನಾಗರಾಜ್, ಹೊಸಪೇಟೆ ಸೇರಿದಂತೆ ಜಿಲ್ಲೆಯಾದ್ಯಂತ ಪ್ರತಿ ತಿಂಗಳು ನೂರಾರು ನಾಯಿ ಕಡಿತ ಪ್ರಕರಣಗಳು ವರದಿಯಾಗುತ್ತಿವೆ. ಆದರೆ ಬೀದಿ ನಾಯಿಗಳ ಸಂತಾನಹರಣ ಹಾಗೂ ರೇಬೀಸ್ ನಿರೋಧಕ ಸಾಮೂಹಿಕ ಲಸಿಕೆ ಹಾಕಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರೀಕ್ಷಿತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾಯಿ ಕಡಿತಕ್ಕೆ ಒಳಗಾದ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅನುಕೂಲವಿದೆ. ಆದರೆ ಬಿಪಿಎಲ್ ಕಾರ್ಡ್ ಇಲ್ಲದವರು ಖಾಸಗಿ ಆಸ್ಪತ್ರೆಗಳಲ್ಲಿ ಪ್ರತಿ ರೇಬೀಸ್ ನಿರೋಧಕ ಚುಚ್ಚುಮದ್ದಿಗೆ 400ರಿಂದ 500 ರೂ.ವರೆಗೆ ವೆಚ್ಚ ಮಾಡಬೇಕಾದ ಪರಿಸ್ಥಿತಿ ಇದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಹೊರೆಯಾಗುತ್ತಿದೆ ಎಂದರು.

ನಾಯಿ ಕಡಿತದಿಂದ ಗಾಯಗೊಂಡವರಿಗೆ 5,000 ರೂ. ಚಿಕಿತ್ಸಾ ವೆಚ್ಚ ಹಾಗೂ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶಿಸಿರುವುದಾಗಿ ಉಲ್ಲೇಖಿಸಿದ ಅವರು, ಇಂತಹ ಪರಿಹಾರ ಮತ್ತು ಚಿಕಿತ್ಸಾ ಸೌಲಭ್ಯಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಬೇಕು ಎಂದು ಒತ್ತಾಯಿಸಿದರು.

ರೇಬೀಸ್ ಅತ್ಯಂತ ಅಪಾಯಕಾರಿ ಕಾಯಿಲೆಯಾಗಿದ್ದು, ಒಮ್ಮೆ ರೋಗದ ಲಕ್ಷಣಗಳು ಕಾಣಿಸಿಕೊಂಡ ನಂತರ ಪರಿಣಾಮಕಾರಿ ಚಿಕಿತ್ಸೆ ಇಲ್ಲದೆ ಸಾವಿನ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ನಾಯಿ ಕಡಿತವನ್ನು ನಿರ್ಲಕ್ಷಿಸದೆ ತಕ್ಷಣ ಚಿಕಿತ್ಸೆ ಪಡೆಯುವುದು ಅಗತ್ಯ. ಬೀದಿ ನಾಯಿಗಳ ದಾಳಿಯಿಂದ ಮಕ್ಕಳು, ವೃದ್ಧರು ಹಾಗೂ ಮಹಿಳೆಯರು ಆತಂಕದಿಂದ ರಸ್ತೆಗಳಲ್ಲಿ ಸಂಚರಿಸುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಪಶುಸಂಗೋಪನಾ ಇಲಾಖೆಯು ಸಾಕು ನಾಯಿಗಳಷ್ಟೇ ಅಲ್ಲದೆ ಬೀದಿ ನಾಯಿಗಳಿಗೂ ರೇಬೀಸ್ ನಿರೋಧಕ ಲಸಿಕೆ ಹಾಕುವ ವ್ಯವಸ್ಥೆ ಮಾಡಬೇಕು. ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ, ಸಾಮೂಹಿಕ ಲಸಿಕಾ ಅಭಿಯಾನ ಹಾಗೂ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ತುರ್ತು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಜೀವ ಮತ್ತು ಸುರಕ್ಷತೆಗೆ ಆದ್ಯತೆ ನೀಡಿ ಜನರ ಆತಂಕ ದೂರ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಟ್ರಸ್ಟ್ ಉಪಾಧ್ಯಕ್ಷ ಎ. ಗೋವಿಂದ, ರಫೀಕ್, ಶಂಕರಪ್ಪ, ಹುಲುಗಪ್ಪ, ರಾಮಾಂಜಿನೇಯಲು, ಗಾಳೇಶ್, ಉದಯ್ ಕುಮಾರ್, ಗೋವಿಂದ, ವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X