ವಿಜಯನಗರ | ಗುತ್ತಿಗೆ ಆಧಾರದ ವೈದ್ಯರ ನೇಮಕಾತಿ: ಆದೇಶ ಪತ್ರ ವಿತರಣೆ

ವಿಜಯನಗರ (ಹೊಸಪೇಟೆ): ಜಿಲ್ಲೆಯ ನೂತನ ಜಿಲ್ಲಾಸ್ಪತ್ರೆಯಲ್ಲಿ ಖಾಲಿ ಇರುವ ವೈದ್ಯಕೀಯ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗಿದ್ದು, ಆಯ್ಕೆಯಾದ ಎಂಬಿಬಿಎಸ್ ವೈದ್ಯಾಧಿಕಾರಿಗಳಿಗೆ ಹಾಗೂ ತಜ್ಞ ವೈದ್ಯರಿಗೆ 1 ವರ್ಷದ ಅವಧಿಗೆ ಗುತ್ತಿಗೆ ಆಧಾರದ ನೇಮಕಾತಿ ಆದೇಶ ಪತ್ರಗಳ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಲಿಂಗರಾಜ ಟಿ. ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story




