Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಜನಸಂಖ್ಯೆ...

Vijayanagara | ಜನಸಂಖ್ಯೆ ನಿಯಂತ್ರಣಕ್ಕೆ ಜಾಗೃತಿ ಜಾಥಾ

ವಾರ್ತಾಭಾರತಿವಾರ್ತಾಭಾರತಿ18 July 2026 8:05 PM IST
share
Vijayanagara | ಜನಸಂಖ್ಯೆ ನಿಯಂತ್ರಣಕ್ಕೆ ಜಾಗೃತಿ ಜಾಥಾ
ಆರೋಗ್ಯಕರ ಕುಟುಂಬ ಯೋಜನೆ ಅಳವಡಿಸಿಕೊಳ್ಳುವಂತೆ ಡಿಎಚ್‌ಒ ಕರೆ

ವಿಜಯನಗರ (ಹೊಸಪೇಟೆ), ಜು.18: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ ಅಂಗವಾಗಿ ಶನಿವಾರ ನಗರದಲ್ಲಿ ಜನಸಂಖ್ಯೆ ನಿಯಂತ್ರಣ ಕುರಿತು ಜಾಗೃತಿ ಜಾಥಾ ನಡೆಸಲಾಯಿತು.

ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ), ಜನಸಂಖ್ಯೆ ನಿಯಂತ್ರಣವು ಒಂದು ದಿನದ ಕಾರ್ಯಕ್ರಮವಲ್ಲ. ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಈ ಕುರಿತು ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಸುರಕ್ಷಿತ ಸಮಯದಲ್ಲಿ ಗರ್ಭಧಾರಣೆ ಹಾಗೂ ಎರಡು ಮಕ್ಕಳ ಜನನದ ನಡುವೆ ಕನಿಷ್ಠ ಮೂರು ವರ್ಷಗಳ ಅಂತರ ಕಾಯ್ದುಕೊಳ್ಳುವುದು ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದೆ. ಅನಗತ್ಯ ಗರ್ಭಧಾರಣೆ ತಡೆಯಲು ಆರೋಗ್ಯ ಇಲಾಖೆಯಲ್ಲಿ ಲಭ್ಯವಿರುವ ಗರ್ಭನಿರೋಧಕ ಸಾಧನಗಳು, ಚುಚ್ಚುಮದ್ದು ಹಾಗೂ ಮಾತ್ರೆಗಳ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕುಟುಂಬ ಯೋಜನೆ ಮಹಿಳೆಯರಿಗೆ ಮಾತ್ರ ಸೀಮಿತವಲ್ಲ. ಪುರುಷರೂ ಸಂತಾನಹರಣ ಸೇರಿದಂತೆ ಸುರಕ್ಷಿತ ಕುಟುಂಬ ಯೋಜನಾ ವಿಧಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಮಹಿಳೆಯರ ಆರೋಗ್ಯ ಕಾಪಾಡುವಲ್ಲಿ ಪಾಲುದಾರರಾಗಬೇಕು ಎಂದು ಕರೆ ನೀಡಿದರು.

ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಿಂದ ಆರಂಭವಾದ ಜಾಥಾ ಪುಣ್ಯಮೂರ್ತಿ ವೃತ್ತ, ಬಸ್ ನಿಲ್ದಾಣ, ಡಾ. ಪುನೀತ್ ರಾಜ್‌ಕುಮಾರ್ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ದೊಡ್ಡ ಮಸೀದಿ ಮಾರ್ಗವಾಗಿ ಸಂಚರಿಸಿ ಮತ್ತೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಸಮಾಪ್ತಿಯಾಯಿತು.

ಜಾಥಾದಲ್ಲಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಜಂಬಯ್ಯ, ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ವಿನಯ್, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ರಾಧಿಕಾ, ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡ್ಡಮನಿ, ಕ್ಷಯರೋಗ ನಿರ್ಮೂಲನಾಧಿಕಾರಿ ಭಾಸ್ಕರ್, ಆರೋಗ್ಯ ನಿರೀಕ್ಷಣಾಧಿಕಾರಿ ಧರ್ಮನಗೌಡ, ತಾಲೂಕು ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X